ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್‌ ಭೇಟಿ

Public TV
1 Min Read

ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್‌ (Daali Dhananjay) ಭೇಟಿ ನೀಡಿದ್ದಾರೆ. ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಸಿದ್ದಗಂಗಾ ಶ್ರೀಗಳಿಗೆ (Siddaganga Shree) ಡಾಲಿ ಆಹ್ವಾನ ನೀಡಿದ್ದಾರೆ.

ಮಠಕ್ಕೆ ಭೇಟಿ ನೀಡಿದ ನಟ, ಮೊದಲು ಶಿವಕುಮಾರ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಲಗ್ನ ಪತ್ರಿಕೆ ಪೂಜೆ ಮಾಡಿಸಿದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು. ಈ ವೇಳೆ ಸ್ನೇಹಿತರು ಜೊತೆಗಿದ್ದರು. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭಾವಿ ಪತ್ನಿ ಜೊತೆ ನಟ ಡಾಲಿ ಧನಂಜಯ್‌ ಭೇಟಿ – ಲಗ್ನ ಪತ್ರಿಕೆಗೆ ವಿಶೇಷ ಪೂಜೆ ಸಲ್ಲಿಕೆ

ಇದೇ ಫೆ.16ಕ್ಕೆ ವೈದ್ಯೆ ಧನ್ಯತಾ ಅವರೊಂದಿಗೆ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ನ.17 ರಂದು ವೈದ್ಯೆಯೊಂದಿಗೆ ಸರಳವಾಗಿ ನಟ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಮಾಜಿ ಪಿಎಂ ಹೆಚ್‌.ಡಿ.ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಗಣ್ಯರಿಗೆ ನಟ ವಿವಾಹಕ್ಕೆ ಆಹ್ವಾನ ನೀಡಿದ್ದಾರೆ. ಮೈಸೂರಿನಲ್ಲಿ ಮದುವೆ ಸಮಾರಂಭ ನಡೆಯಲಿದೆ. ಇದನ್ನೂ ಓದಿ: ಸರಳವಾಗಿ ನಡೆಯಿತು ಡಾಲಿ ಧನಂಜಯ್, ಧನ್ಯತಾ ನಿಶ್ಚಿತಾರ್ಥ- ಫೆ.16ಕ್ಕೆ ಮದುವೆ

Share This Article