– ಇದೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಸಭೆ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಇದೇ ಫೆ.13ಕ್ಕೆ ಸಂಪುಟ ಸಭೆ ನಿಗದಿಯಾಗಿದೆ.
ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಪ್ರತಿಮೆ ಇರುವ ಸುಂದರ ಪರಿಸರದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಇದನ್ನೂ ಓದಿ: ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿಯಿಂದಾಗಿ ದರ ಹೆಚ್ಚಳ ಆರೋಪ ಸುಳ್ಳು – ಬೋಸರಾಜು
ಇದೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಸಂಪುಟ ಸಭೆ ನಡೆಯುತ್ತಿದೆ. ಬೆಳಗಾವಿ, ಕಲಬುರಗಿ ನಂತರ ಇದೀಗಾ ಚಾಮರಾಜನಗರ ಜಿಲ್ಲೆಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಿಕ್ಕಿಯಾಗಿದೆ. ಗಿರಿಜನರಿಗೆ ವಸತಿ ಸೇರಿದಂತೆ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ.
ಜಿಲ್ಲಾಡಳಿತದಿಂದ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಕ್ಯಾಬಿನೆಟ್ ಮೀಟಿಂಗ್‌ಗೆ ಜಿಲ್ಲಾಡಳಿತದಿಂದ ಸಿದ್ದತೆ ಆರಂಭವಾಗಿದೆ. ಹನೂರು ಶಾಸಕ ಮಂಜುನಾಥ್ ಅವರು ಸ್ಥಳ ಪರಿಶೀಲನೆ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನ್ ಬೇಕಾದ್ರು ಮಾಡ್ತಾರೆ: ಹೆಚ್‌ಡಿಕೆ

 
			
 
		 
		 
                                
                              
		