ಯಶ್ ಫ್ಯಾನ್ಸ್‌ಗೆ ಸರ್ಪ್ರೈಸ್- ‘ಟಾಕ್ಸಿಕ್’ ಟೀಮ್‌ನಿಂದ ಸಿಕ್ತು ಸಿಹಿ ಸುದ್ದಿ

By
2 Min Read

ನ್ಯಾಷನಲ್ ಸ್ಟಾರ್ ಯಶ್ (Yash) ಅವರು ಇದೇ ಜ.8ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ದಿನ ‘ಟಾಕ್ಸಿಕ್’ ಚಿತ್ರದ ಬಗ್ಗೆ ಏನಾದರೂ ಅಪ್‌ಡೇಟ್ ಸಿಗಬಹುದು ಎಂದು ನಿರೀಕ್ಷಿಸಿದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ಚಿತ್ರತಂಡದ ಕಡೆಯಿಂದ ಬಿಗ್ ನ್ಯೂಸ್‌ವೊಂದು ಸಿಕ್ಕಿದೆ. ಸಿನಿಮಾ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಯಶ್ ಬರ್ತ್‌ಡೇಯಂದು (ಜ.8) ಬೆಳಗ್ಗೆ 10:25ಕ್ಕೆ ಗೀತು ಮೋಹನ್‌ದಾಸ್‌ ನಿರ್ದೇಶನದ ‘ಟಾಕ್ಸಿಕ್’ (Toxic) ಬಗ್ಗೆ ಅಪ್‌ಡೇಟ್ ಸಿಗಲಿದೆ ಎಂದು ಕೆವಿಎನ್ (KVN Productions) ನಿರ್ಮಾಣ ಸಂಸ್ಥೆ ತಿಳಿಸಿದೆ. ಯಶ್ ಕೂಡ ಇದೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸದ್ಯ ರಿಲೀಸ್ ಆಗಿರೋ ಪೋಸ್ಟರ್‌ನಲ್ಲಿ ಯಶ್ ಅವರು ಹಳೆಯ ಕಾಲದ ಕಾರಿನ ಮೇಲೆ ನಿಂತಿದ್ದಾರೆ. ಅವರ ಬಾಯಲ್ಲಿ ಸಿಗರೇಟ್ ಇದೆ. ತಲೆಗೆ ಹ್ಯಾಟ್ ಧರಿಸಿದ್ದಾರೆ. ಇದು ಅವರ ಗೆಟಪ್ ಎಂದು ಹೇಳಲಾಗುತ್ತಿದೆ. ಈ ಮೊದಲು ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ಅವರು ತಲೆಗೆ ಹ್ಯಾಟ್ ಧರಿಸಿಯೇ ಕಾಣಿಸಿಕೊಂಡಿದ್ದರು. ಇದೇ ಲುಕ್ ಸಿನಿಮಾದಲ್ಲೂ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಫ್ಯಾನ್ಸ್ ಜ.8ರಂದು ಯಶ್ ಲುಕ್ ನೋಡಲು ಕಾಯುತ್ತಿದ್ದಾರೆ.

ಇನ್ನೂ ಜ.8ರಂದು ಬೆಂಗಳೂರಿನಲ್ಲಿ ಇರುವುದಿಲ್ಲ ಬರ್ತ್‌ಡೇ ಆಚರಣೆ ಮಾಡಲ್ಲ ಎಂದು ಫ್ಯಾನ್ಸ್ ಯಶ್ ಈಗಾಗಲೇ ಮಾಹಿತಿ ನೀಡಿದ್ದಾರೆ. ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಯಶ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.

ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಬರೆದಿದ್ದರು.

ಅಂದಹಾಗೆ, ಕಳೆದ ವರ್ಷ ಯಶ್ ಹುಟ್ಟುಹಬ್ಬದಂದು ಅವರ ಫ್ಲೆಕ್ಸ್ ಕಟ್ಟುವಾಗ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಮೂವರು ಯುವಕರು ಮೃತಪಟ್ಟಿದ್ದರು. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.

Share This Article