ಸರ್ಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ

Public TV
2 Min Read

ಚಿತ್ರದುರ್ಗ: ನಕ್ಸಲರು (Naxals) ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ. ಇಷ್ಟುವರ್ಷ ಸಿಗದವರು ಈಗ ಹೇಗೆ ಸಿಕ್ಕರು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಪ್ರಶ್ನಿಸಿದ್ದಾರೆ.

ಚಿತ್ರದುರ್ಗದ (Chitradurga) ಮಾದಾರಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಕ್ಸಲರು ಬರಿಗೈನಲ್ಲಿ ಶರಣಾಗಿದ್ದಾರೆ. ಅವರ ಶಸ್ತ್ರಾಸ್ತ್ರ ಎಲ್ಲೋದವು? ಇವರ ಹಿಂದೆ ಇನ್ನೂ ನಕ್ಸಲಿರಿದ್ದಾರಾ? ಶಸ್ತ್ರಾಸ್ತ್ರ ಅವರಿಗೆ ಕೊಟ್ಟು ಬಂದಿದ್ದಾರೆಂಬ ಪ್ರಶ್ನೆ ಮೂಡಲಿವೆ. ನಕ್ಸಲರನ್ನು ಕೋರ್ಟ್, ಪೊಲೀಸರ ಮುಂದೆ ಶರಣಾಗತಿ ಮಾಡಬೇಕು. ಸಿಎಂ ಮುಂದೆ ನಕ್ಸಲರ ಶರಣಾಗತಿ ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ

ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ. ದಲಿತ ಮಾಫಿಯಾ ಕಾಂಗ್ರೆಸ್‌ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು. ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ. ಇವರಲ್ಲಿ ಎರಡು ಗುಂಪುಗಳಿವೆ. ಒಂದು ದಲಿತ ವಿರೋಧಿ ಮಾಫಿಯಾವಿದೆ. ಇನ್ನೊಂದು ದಲಿತ ಮಾಫಿಯಾವಿದೆ. ಇವರೆಲ್ಲರೂ ಮತ್ತೋರ್ವ ದಲಿತ ಬೆಳೆಯಲು ಬಿಡಲ್ಲ. ಕಾಂಗ್ರೆಸ್‌ನಲ್ಲಿ ದಲಿತರಿಗೆ ಬೆಲೆ ಇಲ್ಲ. ಕಾಂಗ್ರೆಸ್ ನಾಶವಾಗುವ ಸ್ಥಿತಿಯಲ್ಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: MUDA Scam | ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧವೂ ಲೋಕಾಯುಕ್ತಕ್ಕೆ ದೂರು – 2 ಸೈಟು ಕಿಕ್‌ಬ್ಯಾಕ್‌ ಆರೋಪ

ಮುಡಾದಲ್ಲಿ ಸುಳ್ಳು ದಾಖಲೆ ನೀಡಿ ಜಿಟಿಡಿ ಫ್ಯಾಮಿಲಿ ಸೈಟ್ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು 14 ಸೈಟ್‌ಗಳ ವಿಚಾರವಲ್ಲ, ಸಾವಿರಾರು ಸೈಟ್‌ಗಳ ವಿಚಾರ. ಅವರನ್ನು ರಕ್ಷಣೆ ಮಾಡಲು ಎಲ್ಲಾ ಕೇಸ್ ಮುಚ್ಚಿ ಹಾಕುವ ಪ್ರಯತ್ನ. ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿ ರಾತ್ರೋರಾತ್ರಿ ಹೋಗಿ ಸೈಟ್ ವಾಪಾಸ್ ಕೊಟ್ಟಿದ್ದು ಯಾಕೆ? ತಪ್ಪು ಮಾಡಿದ್ದು ಅರಿವಾದ ಮೇಲೆ ಸಿಎಂ ಸೈಟ್ ವಾಪಸ್ ಕೊಟ್ಟಿದ್ದಾರೆ. ನಿಮಗೂ ಭ್ರಷ್ಟಾಚಾರಕ್ಕೂ ಹತ್ತಿರದ ನಂಟಿದೆ. ಈ ಕೇಸ್ ಕೂಡ ಸಿಬಿಐಗೆ ಕೊಟ್ಟರೆ ಎಲ್ಲರ ಬಂಡವಾಳ ಹೊರಗಡೆ ಬರುತ್ತದೆ. ಇದರಲ್ಲಿ ಯಾರಿದ್ದಾರೆ, ಯಾರಿಲ್ಲ ಎಂಬುದು ಪ್ರಶ್ನೆಯಲ್ಲ. ನನ್ನ ಸಂಬಂಧಿಗಳು ಇದ್ದರೂ ನಾನು ಇದನ್ನೇ ಮಾತನಾಡೋದು. ಜನಪರ ವ್ಯವಸ್ಥೆ ಆಗಬೇಕೆ ಹೊರತು, ಸಂಬಂಧಿಕರು, ಸ್ವಾರ್ಥದ ವ್ಯವಸ್ಥೆ ಆಗಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿ ಮೇಲೆ ಫೈರಿಂಗ್‌!

Share This Article