2ಕ್ಕಿಂತ ಹೆಚ್ಚು ಮಕ್ಕಳಿದ್ರೆ ಮಾತ್ರ ಸ್ಥಳೀಯ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ: ಚಂದ್ರಬಾಬು ನಾಯ್ಡು

Public TV
1 Min Read

ಅಮರಾವತಿ: ಇನ್ನುಮುಂದೆ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ ನೀಡುವುದಾಗಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಘೋಷಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಳ ವಿಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಮೊನ್ನೆಯಷ್ಟೇ ಮಧ್ಯಪ್ರದೇಶದ ನಿಗಮವೊಂದು ನಾಲ್ಕು ಮಕ್ಕಳನ್ನು ಹೆತ್ತರೇ 1 ಲಕ್ಷ ನಗದು ಬಹುಮಾನ ಘೋಷಿಸಿತ್ತು. ಈ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಈ ಹೇಳಿಕೆ ನೀಡಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿಲ್ಲದವರು ಸರಪಂಚ್ ಆಗಲು ಸಾಧ್ಯವಿಲ್ಲ. ಪುರಸಭೆ ಕೌನ್ಸಿಲರ್, ಪಾಲಿಕೆ ಮೇಯರ್ ಆಗಲು ಸಾಧ್ಯವಿಲ್ಲ ಎಂದು ನಾಯ್ಡು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕ ಜಂಗಲ್ ರಾಜ್ಯ ಆಗಿದೆ – ಬೀದರ್ ಗುಂಡಿನ ದಾಳಿಗೆ ಬೊಮ್ಮಾಯಿ ದಿಗ್ಭ್ರಮೆ

ಹಳೆ ತಲೆಮಾರಿನವರು ಹೆಚ್ಚೆಚ್ಚು ಮಕ್ಕಳನ್ನು ಹೊಂದಿರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ನೀವು ಒಂದು ಮಗುವನ್ನು ಮಾತ್ರ ಪಡೆಯುತ್ತಿದ್ದೀರಿ. ನಿಮ್ಮ ಪೋಷಕರು ನಿಮ್ಮಂತೆಯೇ ಯೋಚಿಸಿದ್ದರೆ ಈ ಜಗತ್ತಿಗೆ ನೀವು ಬರುತ್ತಿರಲಿಲ್ಲ. ಹೀಗೆ ಮಾಡದೇ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ಬಗ್ಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: 2ನೇ ಹೆಂಡ್ತಿ ಬಿಟ್ಟು ತನ್ನ ಬಳಿಯೇ ಇರುವಂತೆ ಒತ್ತಾಯ – ಮೊದಲ ಹೆಂಡ್ತಿಯನ್ನೇ ಹತ್ಯೆಗೈದ ಗಂಡ

ರಾಜ್ಯದಲ್ಲಿ ನವದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದುವಂತೆ ಮಾಡಲು ಹೊಸ ಪ್ರೋತ್ಸಾಹಕ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಸಂಖ್ಯೆ ಹೆಚ್ಚಳಕ್ಕೆ ರಷ್ಯಾದಲ್ಲಿ ʻಸೆಕ್ಸ್‌ ಸಚಿವಾಲಯʼ ಸ್ಥಾಪನೆಗೆ ಪ್ಲ್ಯಾನ್‌ – ಭಾರತದಲ್ಲಿ ಏನಾಗ್ತಿದೆ?

Share This Article