ಚಾಮರಾಜನಗರ| ಚಾಲಕನಿಗೆ ಮೂರ್ಛೆ; ಮರಕ್ಕೆ ಡಿಕ್ಕಿಯಾದ ಬಸ್

Public TV
0 Min Read

ಚಾಮರಾಜನಗರ: ಚಾಲಕನಿಗೆ ಮೂರ್ಛೆ ರೋಗ ಬಂದಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ನಡೆದಿದೆ.

ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆರೋಗ ಕಾಣಿಸಿಕೊಂಡ ಪರಿಣಾಮ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮುಂಭಾಗದಲ್ಲಿ ಕುಳಿತಿದ್ದ ಐದು ಮಂದಿಗೆ ಗಾಯಗಳಾಗಿದೆ‌. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Share This Article