Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

Public TV
1 Min Read

ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arasikere) ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದರ್ಶನ್ (22) ಆತ್ಮಹತ್ಯೆಗೆ ಶರಣಾದ ಯುವಕ. ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೇವಿನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸಿ ಜೊತೆಯಲ್ಲಿ ಓಡಾಡಿದ್ದರು. ಬಿಎ ಮುಗಿಸಿ ವ್ಯವಸಾಯ ಮಾಡುತ್ತಿದ್ದ ದರ್ಶನ್ ಯುವತಿಗೆ ಮದುವೆಯಾಗೋಣ ಎಂದಿದ್ದ. ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದನ್ನೂ ಓದಿ: ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಇದರಿಂದ ಮನನೊಂದ ದರ್ಶನ್ ಫೆ.5ರಂದು ಮನೆಯಲ್ಲಿಯೇ ವಿಷ ಸೇವಿಸಿದ್ದಾನೆ. ವಿಷ ಸೇವನೆ ಬಳಿಕ ದರ್ಶನ್ ವಾಂತಿ ಮಾಡುತ್ತಿದ್ದನ್ನು ಕಂಡು ಸ್ನೇಹಿತರಾದ ರವಿ ಮತ್ತು ಯಶ್ವಂತ್ ಪ್ರಶ್ನಿಸಿದಾಗ, ಯುವತಿ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ನನ್ನ ಮನಸ್ಸಿಗೆ ಬೇಜಾರಾಗಿದೆ. ಹಾಗಾಗಿ ವಿಷ ಸೇವನೆ ಮಾಡಿರುವುದಾಗಿ ಹೇಳಿ ದರ್ಶನ್ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಚಾಮರಾಜನಗರ| ಚಾಲಕನಿಗೆ ಮೂರ್ಛೆ; ಮರಕ್ಕೆ ಡಿಕ್ಕಿಯಾದ ಬಸ್

ತಕ್ಷಣವೇ ಸ್ನೇಹಿತರು ಅರಸೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ದರ್ಶನ್ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

ಇನ್ನು ಘಟನೆ ಸಂಬಂಧ ಯುವತಿ ವಿರುದ್ಧ ದರ್ಶನ್ ಬಾವ ಶಂಕರ್ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆ | ಸರ್ಕಾರದಿಂದ ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನ: ರವಿಕುಮಾರ್ ವ್ಯಂಗ್ಯ

Share This Article