ಕಾರು ಅಪಘಾತ – ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ್‌ ಏರ್‌ ಅಂಬುಲೆನ್ಸ್‌ ಮೂಲಕ ಬೆಂಗಳೂರಿಗೆ

By
0 Min Read

ಬೆಂಗಳೂರು/ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್‌ (Kuruburu Shanthakumar) ಅವರನ್ನು ಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗುತ್ತಿದೆ.

ಪಂಜಾಬ್ ಗಡಿಯ ಪಾಟಿಯಾಲ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಗಾಯಗೊಂಡಿದ್ದರು. ಪಾಟಿಯಾಲದ ಸರ್ಕಾರಿ ರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸದ್ಯ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗ್ತಿದೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ರೈತ ಮುಖಂಡ ಚಿಕಿತ್ಸೆ ಪಡೆಯಲಿದ್ದಾರೆ.

Share This Article