10 ವರ್ಷ ಜೈಲು, 5 ಲಕ್ಷ ದಂಡ – ಲೇವಾದೇವಿದಾರರ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಅನುಮೋದನೆ

Public TV
1 Min Read

ಬೆಂಗಳೂರು: ಲೇವಾದೇವಿದಾರರ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡನೆಗೆ ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಇನ್ಮುಂದೆ ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್, ಯಾವುದೇ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ತಿದ್ದುಪಡಿ ತರುವ ಕರ್ನಾಟಕ ಅಧಿಕ ಬಡ್ಡಿ ನಿಷೇಧ (ತಿದ್ದುಪಡಿ) ವಿಧೇಯಕ – 2025ಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

ಮಾರ್ಚ್ 3 ರಿಂದ‌ ಆರಂಭವಾಗುವ ಅದಿವೇಶನದಲ್ಲಿ‌ ಈ ಬಾರಿ ತಿದ್ದುಪಡಿ ವಿಧೇಯಕ‌ ಮಂಡನೆಗೆ ತೀರ್ಮಾನಿಸಲಾಗಿದೆ. ಮಿತಿ ಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರು, ಪಾನ್ ಬ್ರೋಕರ್ಸ್ ಸೇರಿ ಇತರ ಸಹಕಾರ ಸಂಘಗಳ ಮೇಲೆ ನಿಯಂತ್ರಣ ಹೇರಲು ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ 2004 ಕಾಯ್ದೆ ಜಾರಿಯಲ್ಲಿದೆ. ಇದರಡಿ ಮಿತಿ ಮೀರಿ ಬಡ್ಡಿ ವಿಧಿಸುವವರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಸಹಕಾರ ಇಲಾಖೆ ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ 2004 ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಿತ್ತು.

ಈಗಿರುವ ಗರಿಷ್ಠ 3 ವರ್ಷ ಶಿಕ್ಷೆ ಪ್ರಮಾಣವನ್ನು ತಿದ್ದುಪಡಿ ತಂದು ಗರಿಷ್ಠ 10 ವರ್ಷ ವರೆಗೆ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅಧಿಕ ಬಡ್ಡಿ ವಿಧಿಸುವ ಲೇವಾದೇವಿದಾರರಿಗೆ ಇರುವ ದಂಡ ಪ್ರಮಾಣವನ್ನು 30,000ದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗುವುದು.

Share This Article