ನಿನ್ನ ನಗುವಿನ ಬೆಳಕಲ್ಲಿ, ನನ್ನ ಬದುಕು ಬೆಳಗಿದೆ: ಪತ್ನಿ ಬರ್ತ್‌ಡೇಗೆ ರಿಷಬ್ ಲವ್ಲಿ ವಿಶ್

Public TV
1 Min Read

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ ಚಾಪ್ಟರ್ 1’ (Kantara Chapter 1) ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಪತ್ನಿ ಪ್ರಗತಿ ಶೆಟ್ಟಿ ಬರ್ತ್‌ಡೇಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ನಿನ್ನ ನಗುವಿನ ಬೆಳಕಲ್ಲಿ, ನನ್ನ ಬದುಕು ಬೆಳಗಿದೆ ಎಂದು ಲವ್ಲಿ ಆಗಿ ಪತ್ನಿಗೆ ರಿಷಬ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ, ನಗುವಿನ ಪುಟ್ಟ ಕ್ಷಣಗಳಿಂದ ಹಿಡಿದು, ನಾವು ಒಟ್ಟಿಗೆ ಕಾಣುವ ದೊಡ್ಡ ಕನಸುಗಳವರೆಗೆ, ನಿನ್ನ ಜೊತೆಗಿನ ಪ್ರತಿಯೊಂದು ಕ್ಷಣವೂ ಒಂದು ಅಮೂಲ್ಯ ಉಡುಗೊರೆ. ನಿನ್ನ ನಗುವಿನ ಬೆಳಕಲ್ಲಿ, ನನ್ನ ಬದುಕು ಬೆಳಗಿದೆ. ಈ ದಿನ, ನಿನ್ನ ಎಲ್ಲಾ ಕನಸುಗಳು ನನಸಾಗಲಿ ಎಂದು ಹಾರೈಸುತ್ತೇನೆ. ಹುಟ್ಟುಹಬ್ಬದ ಶುಭಾಶಯಗಳು ಎಂದು ಪತ್ನಿ ಪ್ರಗತಿಗೆ ರಿಷಬ್ ಶೆಟ್ಟಿ ವಿಶ್ ಮಾಡಿದ್ದಾರೆ. ಅಭಿಮಾನಿಗಳು ಕೂಡ ಪ್ರಗತಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

 

View this post on Instagram

 

A post shared by Rishab Shetty (@rishabshettyofficial)

ಇನ್ನೂ ‘ಕಾಂತಾರ ಚಾಪ್ಟರ್ 1’ರ ಚಿತ್ರೀಕರಣಕ್ಕಾಗಿ ಕುಂದಾಪುರದಲ್ಲಿ ರಿಷಬ್ ಫ್ಯಾಮಿಲಿ ಬೀಡು ಬಿಟ್ಟಿದೆ. ಪತಿಯ ಕೆಲಸಕ್ಕೆ ಪ್ರಗತಿ ಶೆಟ್ಟಿ ಕೂಡ ಬೆಂಬಲವಾಗಿ ನಿಂತಿದ್ದಾರೆ. ಇದನ್ನೂ ಓದಿ:ತಂಗಿ ಬಗ್ಗೆ ರಶ್ಮಿಕಾ ಮಂದಣ್ಣ ಶಾಕಿಂಗ್ ಕಾಮೆಂಟ್: ಹೀಗ್ಯಾಕಂದ್ರು ಶ್ರೀವಲ್ಲಿ?

ಇನ್ನೂ 2017ರಲ್ಲಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಕುಂದಾಪುರದಲ್ಲಿ ಮದುವೆಯಾದರು. ಪ್ರೀತಿಸಿ ಗುರುಹಿರಿಯರ ಸಮ್ಮತಿ ಪಡೆದು ಹೊಸ ಬಾಳಿಗೆ ಕಾಲಿಟ್ಟರು.

Share This Article