Champions Trophy: ದಾಖಲೆ ಬರೆದು ಸೆಮಿ ಪ್ರವೇಶಿಸಿದ ಭಾರತ

Public TV
1 Min Read

ದುಬೈ: ಈ ಬಾರಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ(ICC Champions Trophy) ಭಾರತ ದಾಖಲೆ ಬರೆದಿದೆ. ಲೀಗ್‌ನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ (Team India) ಪಾತ್ರವಾಗಿದೆ.

ದುಬೈನಲ್ಲಿ ಬಾಂಗ್ಲಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ್ದ ಭಾರತ ಪಾಕಿಸ್ತಾನದ (Pakistan) ವಿರುದ್ಧವೂ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಈಗ ನ್ಯೂಜಿಲೆಂಡ್‌ (New Zealand) ವಿರುದ್ಧ 44 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಸೆಮಿ ಫೈನಲ್‌ ಪ್ರವೇಶಿಸಿದೆ. ಇದನ್ನೂ ಓದಿ: ವರುಣ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ಬರ್ನ್‌ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ

ಗ್ರೂಪ್‌ ಬಿ ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಎರಡು ತಂಡಗಳಿಗೆ ತಲಾ ಒಂದೊಂದು ಅಂಕವನ್ನು ಹಂಚಲಾಗಿತ್ತು.

ಭಾರತ 6 ಅಂಕ ಸಂಪಾದಿಸಿದ್ದರೆ ದಕ್ಷಿಣ ಆಫ್ರಿಕಾ 5 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿದೆ. ನ್ಯೂಜಿಲೆಂಡ್‌ ಮತ್ತು ಆಸ್ಟ್ರೇಲಿಯಾ ತಲಾ 4 ಅಂಕ ಸಂಪಾದಿಸಿದೆ.

ಮಂಗಳವಾರ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಮೊದಲ ಸೆಮಿಫೈನಲ್‌ ಪಂದ್ಯ ದುಬೈನಲ್ಲಿ ನಡೆದರೆ ಬುಧವಾರ ದಕ್ಷಿಣ ಆಫ್ರಿಕಾ (South Africa) ಮತ್ತು ನ್ಯೂಜಿಲೆಂಡ್‌ ಮಧ್ಯೆ ಎರಡನೇ ಸೆಮಿಫೈನಲ್‌ ನಡೆಯಲಿದೆ. ಭಾನುವಾರ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯ ನಡೆಯಲಿದೆ.

 

Share This Article