ಪಾಕ್‌ನ ಬಲೂಚಿಸ್ತಾನದಲ್ಲಿ IED ಸ್ಫೋಟ – 5 ಮಂದಿ ಸಾವು

Public TV
1 Min Read

ಇಸ್ಲಾಮಾಬಾದ್: ಬಲೂಚಿಸ್ತಾನದ ಖುಜ್ದಾರ್ ಜಿಲ್ಲೆಯ ಮಾರುಕಟ್ಟೆಯಲ್ಲಿ ಮೋಟಾರ್‌ಬೈಕಿಗೆ ಹಾಕಲಾಗಿದ್ದ ಐಇಡಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.

ನಾಲ್ ಪೊಲೀಸ್ ಠಾಣೆ ಅಧಿಕಾರಿ (SHO) ಬಹಾವಲ್ ಖಾನ್ ಪಿಂದ್ರಾನಿ ಅವರು ಸಾವು-ನೋವುಗಳ ಬಗ್ಗೆ ದೃಢಪಡಿಸಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಸ್ಫೋಟಕವನ್ನು ಮೋಟಾರ್‌ಸೈಕಲ್‌ಗೆ ಅಳವಡಿಸಲಾಗಿತ್ತು. ಕಾರಿನ ಪಕ್ಕದಲ್ಲಿ ಬೈಕ್ ನಿಲ್ಲಿಸಿದ ನಂತರ ರಿಮೋಟ್ ಮೂಲಕ ಸ್ಫೋಟಿಸಲಾಗಿದೆ ಎಂದು ವರದಿಯಾಗಿದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖುಜ್ದಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಾವೇದ್ ಜೆಹ್ರಿ, ಮಾರುಕಟ್ಟೆಯ ಸುತ್ತಮುತ್ತಲಿನ ಕಾಲೇಜು ಬಳಿ ಸ್ಫೋಟ ಸಂಭವಿಸಿದೆ. ವಾಹನಗಳು ಕೂಡ ಸುಟ್ಟುಹೋಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುಜ್ದಾರ್ ಬೋಧನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.

Share This Article