ರಾಷ್ಟ್ರಪತಿ ಆಡಳಿತ ಜಾರಿ ಬಳಿಕ ಮಣಿಪುರದಲ್ಲಿ ಘರ್ಷಣೆ – ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
1 Min Read

ಇಂಫಾಲ: ಗಲಭೆ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.

ಶನಿವಾರ ಕಾಂಗ್‌ಪೊಕ್ಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕುಕಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ. ಮಹಿಳೆಯರು ಸೇರಿದಂತೆ 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು 30 ವರ್ಷದ ಲಾಲ್‌ಗೌತಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ. ಕೀಥೆಲ್‌ಮಂಬಿಯಲ್ಲಿ ನಡೆದ ಘರ್ಷಣೆಯ ವೇಳೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗಮ್ಗಿಫೈ, ಮೋಟ್‌ಬಂಗ್ ಮತ್ತು ಕೀಥೆಲ್‌ಮಂಬಿಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಕನಿಷ್ಠ 25 ಪ್ರತಿಭಟನಾಕಾರರು ವಿವಿಧ ರೀತಿಯಲ್ಲಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article