ಜಾರ್ಖಂಡ್ | ಪಟಾಕಿ ಅಂಗಡಿ ಧಗ ಧಗ – 3 ಮಕ್ಕಳು ಸೇರಿ ಐವರು ಸಜೀವ ದಹನ

Public TV
1 Min Read

ರಾಂಜಿ: ಜಾರ್ಖಂಡ್‌ನ (Jharkhand) ಗರ್ವಾದಲ್ಲಿನ (Garhwa) ಪಟಾಕಿ ಅಂಗಡಿಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿ ಐವರು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಗರ್ವಾ ಜಿಲ್ಲೆಯ ರಂಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸುತ್ತಿರುವುದಾಗಿ ಎಸ್ಪಿ ದೀಪಕ್ ಪಾಂಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಾನಸಿಕ ಹಿಂಸೆ ಕೊಡ್ತಿದ್ದಾರೆ, ತಲೆಗೆ ಸುತ್ತಿಗೆಯಲ್ಲಿ ಹೊಡೆದಂತೆ ಪ್ರಶ್ನೆ ಕೇಳ್ತಾರೆ – ಜಡ್ಜ್ ಮುಂದೆ ರನ್ಯಾ ಹೈಡ್ರಾಮಾ

ರಂಕಾ ಎಸ್‌ಡಿಪಿಒ ರೋಹಿತ್ ರಂಜನ್ ಸಿಂಗ್ ಮಾತನಾಡಿ, ಮಧ್ಯಾಹ್ನ 12.30ರ ಸುಮಾರಿಗೆ ಅಂಗಡಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಐವರು ಮೃತಪಟ್ಟಿದ್ದಾರೆ. ಕೂಡಲೇ ಗಾಯಾಳುಗಳನ್ನು ಛತ್ತೀಸ್‌ಗಢದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸತತ 3 ಸಿನಿಮಾ, 500 ಕೋಟಿ ಕಲೆಕ್ಷನ್: ಯಾರು ಮಾಡಿರದ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

ಮುಖ್ಯಮಂತ್ರಿ ಹೇಮಂತ್ ಸೊರೆನ್ ಘಟನೆಯ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ಗರ್ವಾ ಜಿಲ್ಲೆಯ ರಾಂಕಾ ಬ್ಲಾಕ್‌ನಲ್ಲಿರುವ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐದು ಜನರು ಸಾವನ್ನಪ್ಪಿದ ದುಃಖಕರ ಸುದ್ದಿ ತಲುಪಿದೆ. `ಮರಾಂಗ್ ಬುರು’ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್

Share This Article