ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಲವ್ವಿ ಡವ್ವಿ

By
1 Min Read

ನ್ನಡದ ನಟಿ ಶ್ರೀಲೀಲಾ (Sreeleela) ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರದಲ್ಲಿ ಸುದ್ದಿಯಾಗ್ತಿದ್ದಾರೆ. ನಟಿಯ ಡೇಟಿಂಗ್ ವಿಚಾರ ಮುನ್ನೆಲೆಗೆ ಬಂದಿದೆ. ಬಿಟೌನ್ ಹೀರೋ ಕಾರ್ತಿಕ್ ಆರ್ಯನ್‌ರನ್ನು (Karthika Aryan) ಶ್ರೀಲೀಲಾ ಪ್ರೀತಿಸ್ತಾ ಇದ್ದಾರೆ ಅನ್ನೋದು ಸಖತ್ ಸುದ್ದಿ ಆಗಿದೆ.

ಇತ್ತೀಚೆಗೆ ನಡೆದ ಅವಾರ್ಡ್ ಫಂಕ್ಷನ್‌ನಲ್ಲಿ ಕಾರ್ತಿಕ್ ಆರ್ಯನ್ (Karthika Aryan) ತಾಯಿಗೆ ಯಾವ ಥರದ ಸೊಸೆ ಬೇಕು ಎಂದು ಕರಣ್ ಜೋಹರ್ ಕೇಳಿದರು. ಅದಕ್ಕೆ ನಟನ ತಾಯಿ, ‘ಡಾಕ್ಟರ್ ಆಗಿರುವ ಸೊಸೆ ಬೇಕು’ ಎಂದಿದ್ದರು. ಕಾರ್ತಿಕ್ ಆರ್ಯನ್ ತಾಯಿ ಆಡಿದ ಮಾತು ಕಾರ್ತಿಕ್ ಮತ್ತು ಶ್ರೀಲೀಲಾ ಡೇಟಿಂಗ್ ಸುದ್ದಿಗೆ ಪುಷ್ಠಿ ನೀಡಿದೆ. ಇದನ್ನೂ ಓದಿ:ಬೆಸ್ಟ್‌ ಆಕ್ಟಿಂಗ್‌ ಆಸ್ಕರ್‌ ಅವಾರ್ಡ್‌ ಯಾರಿಗೆ ಹೋಗುತ್ತೆ ಅಂದ್ರೆ.. – ದರ್ಶನ್ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್

ಎಲ್ಲರಿಗೂ ಗೊತ್ತಿರುವಂತೆ ಶ್ರೀಲೀಲಾ ಅವರು ಎಂಬಿಬಿಎಸ್ ಓದಿಕೊಂಡಿದ್ದಾರೆ. ಅಲ್ಲಿ ಕಾರ್ತಿಕ್ ತಾಯಿ ‘ಡಾಕ್ಟರ್ ಸೊಸೆ ಬೇಕು’ ಎಂದ ಕೂಡಲೇ ಎಲ್ಲರ ಕಣ್ಣು ಶ್ರೀಲೀಲಾ ಮೇಲೆ ಬಿದ್ದಿದೆ. ಕಾರ್ತಿಕ್ ಮತ್ತು ಶ್ರೀಲೀಲಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದ್ದರೂ, ಈ ಜೋಡಿ ಮಾತ್ರ ಏನು ಪ್ರತಿಕ್ರಿಯೆ ನೀಡುತ್ತಿಲ್ಲ.

ಅಂದಹಾಗೆ, ಅನುರಾಗ್ ಬಸು ನಿರ್ದೇಶನದ ‘ಆಶಿಕಿ 3’ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್‌ಗೆ ಶ್ರೀಲೀಲಾ ನಾಯಕಿಯಾಗಿದ್ದಾರೆ. 2025ರ ದೀಪಾವಳಿಯಂದು ಈ ಸಿನಿಮಾ ರಿಲೀಸ್ ಆಗಲಿದೆ.

Share This Article