ಬೆಂಗಳೂರಿನಲ್ಲಿ ಪಬ್‌ಗಳಿಗೆ ಮಧ್ಯರಾತ್ರಿ 1 ಗಂಟೆವರೆಗೂ ಅವಕಾಶ? – ಡಿಕೆಶಿ ಸುಳಿವು

Public TV
2 Min Read

ಬೆಂಗಳೂರು: ನಗರದಲ್ಲಿ ಪಬ್‌ಗಳಿಗೆ (Pub) ಮಧ್ಯರಾತ್ರಿ 1 ಗಂಟೆವರೆಗೂ ಅನುಮತಿ ‌ಕೊಡೋ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪರೋಕ್ಷ ಸುಳಿವು ಕೊಟ್ಟಿದ್ದಾರೆ‌. ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸದಸ್ಯ ಗೋಪಿನಾಥ್ ಪ್ರಶ್ನೆ ಕೇಳಿದ್ರು. ಬೆಂಗಳೂರಿನಲ್ಲಿ (Bengaluru) ಪಬ್‌ಗಳು ರಾತ್ರಿ 11.30ಕ್ಕೆ ಮುಚ್ಚುವ ನಿಯಮ ಇದೆ. ಆದ್ರೆ ಮಧ್ಯರಾತ್ರಿವರೆಗೂ ಪಬ್ ಗಳು ನಡೆಯುತ್ತಿವೆ. ಇಂದಿರಾ‌ನಗರ ಸೇರಿ ಅನೇಕ ಕಡೆ ನಿಯಮ ಮೀರಿ ಪಬ್ ನಡೆಯುತ್ತಿವೆ. ಇದನ್ನೇ ನೆಪ ಇಟ್ಟುಕೊಂಡು ಪೊಲೀಸರು ಪಬ್ ಅವರಿಗೆ ಕಿರುಕುಳಕೊಡುವ ಕೆಲಸ ಮಾಡ್ತಿದ್ದಾರೆ. ರೆಸ್ಟೋರೆಂಟ್‌ಗಳಿಗೆ ರಾತ್ರಿ 1 ಗಂಟೆವರೆಗೂ ಸರ್ಕಾರ ಅವಕಾಶ ಕೊಟ್ಟಿದೆ. ಅದರಂತೆ ಬೆಂಗಳೂರಿನಲ್ಲಿ ಪಬ್ ಗಳಿಗೂ ರಾತ್ರಿ 1 ಗಂಟೆವರೆಗೂ ಅವಕಾಶ ಕೊಡಿ ಎಂದು ಮನವಿ ಮಾಡಿದರು.‌ ಇದನ್ನೂ ಓದಿ: ಅಪ್ಪ-ಮಗನ ಮೇಲೆ ಹನಿಟ್ರ್ಯಾಪ್‌ ಯತ್ನ – ಸಿಎಂಗೆ ದೂರು ನೀಡಿದ ಸಚಿವ ರಾಜಣ್ಣ ಪುತ್ರ

ಇದಕ್ಕೆ ಅಬಕಾರಿ ಸಚಿವ ತಿಮ್ಮಾಪುರ್ ಉತ್ತರ ನೀಡಿ, ಅಬಕಾರಿ ಇಲಾಖೆಯಲ್ಲಿ ಎರಡು ರೀತಿ ಪಬ್ ಗಳಿಗೆ ನಾವು ಅನುಮತಿ ಕೊಡ್ತೀವಿ. ಸ್ವತಂತ್ರ ಪಬ್ ಗಳಿಗೆ ರಾತ್ರಿ 11.30ವರೆಗೆ ಅವಕಾಶ ಇದೆ‌. CL9 ಜೊತೆ ಹೊಂದುಕೊಂಡಿರೋ ಪಬ್ ಗಳಿಗೆ ಮಧ್ಯರಾತ್ರಿ 1 ಗಂಟೆ ಒಳಗೆ ಅವಕಾಶ ಕೊಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಬ್ ನಡೆಸುತ್ತಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು‌. ಇದನ್ನೂ ಓದಿ: ನನ್ನ ಮೇಲೆ ಹನಿಟ್ರ್ಯಾಪ್‌ಗೆ ಯತ್ನ ಆಗಿದೆ – ಸದನದಲ್ಲೇ ಸಚಿವ ಕೆ.ಎನ್‌ ರಾಜಣ್ಣ ಬಾಂಬ್‌

ಸಚಿವ ತಿಮ್ಮಾಪುರ್ ಮಾತಿಗೆ ಡಿಸಿಎಂ ಡಿಕೆಶಿವಕುಮಾರ್ ಮಧ್ಯ ಪ್ರವೇಶ ಮಾಡಿ ಮಾತನಾಡಿದರು. ಅಬಕಾರಿ ಸಚಿವರು ಅಬಕಾರಿ ನಿಯಮದ ಆದೇಶದ ಬಗ್ಗೆ ಮಾತಾಡ್ತಿದ್ದಾರೆ. ಸಚಿವರು ಹೇಳಿದಂತೆ ಈಗ ಯಾರು ರಾತ್ರಿ 11.30ಕ್ಕೆ ಪಬ್ ಕ್ಲೋಸ್ ಮಾಡೊಲ್ಲ. ಇದನ್ನೇ ಪೊಲೀಸರು ಬಂಡವಾಳ ಮಾಡಿಕೊಂಡು ಕಿರುಕುಳ ‌ಕೊಡ್ತಿದ್ದಾರೆ‌. ಬೆಂಗಳೂರು ಇಂಟರ್ ನ್ಯಾಷನಲ್ ಸಿಟಿ. ಬೆಂಗಳೂರನ್ನ ಲೈವ್ ಆಗಿ ಇಡಬೇಕು. ನನಗೂ ಕೂಡ ಪಬ್ ಅವಧಿ ವಿಸ್ತರಣೆ ಮಾಡೊ ಬಗ್ಗೆ ಡಿಮ್ಯಾಂಡ್ ಬಂದಿವೆ. ರಾತ್ರಿ ಒಂದು ಗಂಟೆವರೆಗೂ ಪಬ್‌ಗಳಿಗೆ ಅವಕಾಶ ಕೊಡುವ ಗೋಪಿನಾಥ್ ಸಲಹೆ ಕರೆಕ್ಟ್ ಇದೆ. ನಾನು ಅದನ್ನ ಒಪ್ಪುತ್ತೇನೆ. ನಾನು, ಗೃಹ ಸಚಿವರು ಅಬಕಾರಿ ಸಚಿವರು ಸಭೆ ಮಾಡಿ ಇದಕ್ಕೆ ಒಂದು ಪರಿಹಾರ ಮಾಡ್ತೀವಿ ಅನ್ನೋ ಮೂಲಕ ಪಬ್ ಗಳ ಅವಧಿ ವಿಸ್ತರಣೆ ಮಾಡೋ ಬಗ್ಗೆ ಪರೋಕ್ಷ ಸುಳಿವು ಕೊಟ್ಟರು. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈಟಿಪಿಎಸ್‌ನ 1,500 ಗುತ್ತಿಗೆ ನೌಕರರಿಂದ ಉಗ್ರ ಹೋರಾಟ

Share This Article