ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Public TV
1 Min Read

ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಕೊಪ್ಪ (Koppa) ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ.

ಮೃತನನ್ನ ವಿಘ್ನೇಶ್ (18) ಎಂದು ಗುರುತಿಸಲಾಗಿದೆ. ಮೃತ ಬಾಲಕ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಒದುತ್ತಿದ್ದ. ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ಕೇಸ್‌ – ಸಮರ್ಥಿಸಿಕೊಂಡ ಪ್ರಮೋದ್‌ ಮಧ್ವರಾಜ್‌ ಮೇಲೆ ಸುಮೋಟೊ ಕೇಸ್‌

ಕಳೆದ ನಾಲ್ಕು ವರ್ಷದ ಹಿಂದೆ ವಿಘ್ನೇಶ್‌ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಸದಾ ಆಸ್ಪತ್ರೆಗೆ ಹೋಗಬೇಕು ಎಂದು ಬೇಜಾರಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಎದೆಮಟ್ಟಕ್ಕೆ ಬೆಳೆದು ನಿಂತ ಮಗ ಆತ್ಮಹತ್ಯೆಗೆ ಶರಣಾಗಿದ್ದಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು | ಮಳೆಗೆ ಬೈಕ್ ಮೇಲೆ ಬಿದ್ದ ಮರ – ಮೂರು ವರ್ಷದ ಮಗು ಸಾವು

Share This Article