ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರೆ ಜನರೇ ಡಿಕೆಶಿ ನೆಟ್ಟು-ಬೋಲ್ಟ್‌ ಟೈಟ್ ಮಾಡ್ತಾರೆ: ನಿಖಿಲ್ ಕುಮಾರಸ್ವಾಮಿ

Public TV
4 Min Read

-ರಾಹುಲ್ ಗಾಂಧಿ ಸಂವಿಧಾನ ಬುಕ್ ಹಿಡಿದುಕೊಂಡು ಗಂಟೆ ಅಲ್ಲಾಡಿಸಿದ್ರೆ ಆಗೋದಿಲ್ಲ

ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಮನಿ-ಹನಿ ಸರ್ಕಾರವಾಗಿದೆ. ಕರ್ನಾಟಕದಲ್ಲಿ (Karnataka) ಸ್ಮಾರ್ಟ್ ಮೀಟರ್‌ಗೆ ಬಾಟಾ ಚಪ್ಪಲಿ ಥರ ಹಣ ಫಿಕ್ಸ್ ಮಾಡಿದ್ದಾರೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.

ಜೆಪಿ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಬಂದು 2 ವರ್ಷಗಳಾಗುತ್ತಾ ಬಂತು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ. ಜನ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಸರ್ಕಾರದಲ್ಲಿ ಸ್ಮಾರ್ಟ್ ಮೀಟರ್ (Smart meter) ಹಗರಣ ನಡೆದಿದೆ. ಇದರ ಟೆಂಡರ್ ಪ್ರಕ್ರಿಯೆ ಸರಿಯಾಗಿ ಆಗಿಲ್ಲ. ಸದನದಲ್ಲೂ ಈ ಹಗರಣ ಬಗ್ಗೆ ಪ್ರಸ್ತಾಪ ಆಗಿದೆ. ಹಲವಾರು ರಾಜ್ಯಗಳು ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿವೆ. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಕೆ ಬಗ್ಗೆ ಸೂಚನೆ ನೀಡಿತ್ತು. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್‌ಗೆ ಸಬ್ಸಿಡಿ ಕೊಡುತ್ತಿದೆ. ಈಗಾಗಲೇ ದೇಶದಲ್ಲಿ 19 ಕೋಟಿಯಷ್ಟು ಸ್ಮಾರ್ಟ್ ಮೀಟರ್ ಅಳವಡಿಸಲಾಗಿದೆ ಎಂದರು.ಇದನ್ನೂ ಓದಿ:ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ 15,568 ಕೋಟಿ ಮೊತ್ತದ ಹಗರಣ ಆಗಿದೆ – ಅಶ್ವಥ್ ನಾರಾಯಣ್ ಬಾಂಬ್

ಕರ್ನಾಟಕದಲ್ಲಿ ದೊಡ್ಡ ಅಕ್ರಮವಾಗಿದೆ. ಕೇರಳ, ಯುಪಿ, ಗುಜರಾತ್, ಹಿಮಾಚಲ ಪ್ರದೇಶ, ತೆಲಂಗಾಣ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್‌ಗೆ 900 ರೂ. ಮಾತ್ರ ಇದೆ. ಆದರೆ ಕರ್ನಾಟಕದಲ್ಲಿ 4,998 ರೂ. ಬಾಟಾ ಚಪ್ಪಲಿ ರೀತಿ ಹಣ ಫಿಕ್ಸ್ ಮಾಡಿದ್ದಾರೆ. 2 ಫೇಸ್ ಮೀಟರ್‌ಗೆ 9,000 ರೂ., 3 ಫೇಸ್ ಮೀಟರ್‌ಗೆ 28,000 ಫಿಕ್ಸ್ ಮಾಡಿದ್ದಾರೆ. ನಿರ್ವಹಣೆ ವೆಚ್ಚ ಅಂತ ಬೇರೆ ರಾಜ್ಯದಲ್ಲಿ 57 ರೂ. ಪ್ರತಿ ತಿಂಗಳು ತೆಗೆದುಕೊಳ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಪ್ರತಿ ತಿಂಗಳು 71 ರೂ. ಪಡೆಯುತ್ತಾರೆ. ಈ ಮೂಲಕ 10 ವರ್ಷಕ್ಕೆ 15,500 ಕೋಟಿ ರೂ. ಸಂಗ್ರಹ ಮಾಡೋಕೆ ಸರ್ಕಾರ ಪ್ಲ್ಯಾನ್ ಮಾಡಿದೆ. ರಾಜಶ್ರೀ ಎಲೆಕ್ಟ್ರಿಕ್ ಕಂಪನಿಗೆ ಅರ್ಹತೆ ಇಲ್ಲ. ಆದರೂ ಟೆಂಡರ್ ಕೊಟ್ಟಿದ್ದಾರೆ. ಯುಪಿಯಲ್ಲಿ ಬ್ಲ್ಯಾಕ್ ಲಿಸ್ಟ್ ಆಗಿರುವ ಕಂಪನಿಗೆ ಸಬ್ ಕಾಂಟ್ರ್ಯಾಕ್ಟ್‌ ಅಂತ ಸಾಫ್ಟ್‌ವೇರ್‌ ಮೆಂಟೇನೆನ್ಸ್‌ಗೆ ಕೊಟ್ಟಿದ್ದಾರೆ. ಯಾಕೆ ಬೆಸ್ಕಾಂನಲ್ಲಿ ತಜ್ಞರು ಇಲ್ಲವಾ? ಇದೊಂದು ದೊಡ್ಡ ಹಗಲು ದರೋಡೆ, 15,500 ಕೋಟಿ ರೂ. ಲೂಟಿ ಆಗಿದೆ. ಕೂಡಲೇ ರೀ-ಟೆಂಡರ್ ಕರೆಯಬೇಕು. ಸೋಮವಾರ ತರಾತುರಿಯಲ್ಲಿ ಅಧಿಕಾರಿಗಳು ಪ್ರೆಸ್‌ಮೀಟ್ ಮಾಡಿಸಿದ್ದಾರೆ. ಬಿಜೆಪಿ-ನಾವು ಒಟ್ಟಾಗಿ ಅಕ್ರಮದ ಬಗ್ಗೆ ಹೋರಾಟ ಮಾಡಿ, ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.

ಈ ಹಗರಣದಲ್ಲಿ ಯಾರು ಇದ್ದಾರೆ ಹೇಳಬೇಕು. ಸಚಿವರು, ಅಧಿಕಾರಿಗಳ ಗಮನಕ್ಕೆ ಬಾರದೇ ಈ ರೀತಿಯಾಗಲು ಸಾಧ್ಯವಿಲ್ಲ. ರಾಜ್ಯದ ಜನತೆಗೆ ಎಲ್ಲಾ ರೀತಿಯಲ್ಲಿಯೂ ಬರೆ ಎಳೆದಿದ್ದಾರೆ. ಯಾವುದು ಬಿಟ್ಟಿಲ್ಲ. ಈಗ ಸ್ಮಾರ್ಟ್ ಮೀಟರ್ ಬರೆ ಹಾಕಿದ್ದಾರೆ. ದಪ್ಪ ಚರ್ಮ ಇಟ್ಟುಕೊಂಡು ಸರ್ಕಾರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಅಂತ ಅವರಿಗೆ ಗೊತ್ತಾಗಿದೆ. ಹೀಗಾಗಿ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡೋಣ ಅಂತ ಮಾಡ್ತಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಬ್ಲಡ್‌ ಕ್ಯಾನ್ಸರ್‌ನಿಂದ ತಮಿಳು ನಟ ಶಿಹಾನ್‌ ಹುಸೈನಿ ನಿಧನ

ಸಂವಿಧಾನ ಬದಲಾವಣೆ ಬಗ್ಗೆ ಡಿಕೆಶಿ ಹೇಳಿಕೆ ವಿಚಾರ:
ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ (Rahul Gandhi) ಸಂವಿಧಾನ ರಕ್ಷಕರು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ರಾಹುಲ್ ಗಾಂಧಿ ಸಂವಿಧಾನದ ಬುಕ್ ಹಿಡಿದುಕೊಂಡು ಗಂಟೆ ಅಲ್ಲಾಡಿಸಿದರೆ ಆಗುವುದಿಲ್ಲ. ಕಾಂಗ್ರೆಸ್‌ನವರು ಮೋದಿ ಸಂವಿಧಾನ ಬದಲಾವಣೆ ಮಾಡ್ತಾರೆ ಅಂತ ಅಪಪ್ರಚಾರ ಮಾಡಿದ್ದರು. ಈಗ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಸಂವಿಧಾನ ಬದಲಾವಣೆ ಮಾಡ್ತೀವಿ ಅಂತ ಹೇಳಿದ್ದಾರೆ. ಕಾಂಗ್ರೆಸ್ (Congress) ಮನಸ್ಥಿತಿಯನ್ನ ಜನರ ಮುಂದೆ ಇಟ್ಟಿದ್ದಾರೆ. ಡಿಕೆಶಿ ತಲೆಗೆ ನಟ್ಟು ಬೋಲ್ಟ್ ಇಲ್ಲದ ಕಾರಣ ಅಲ್ಲಾಡುತ್ತಿದೆ ಅನ್ನಿಸುತ್ತಿದೆ. ಹೀಗೆ ಮಾತಾಡಿದರೆ ರಾಜ್ಯದ ಜನರೇ ಇವರ ನೆಟ್ಟು ಬೋಲ್ಟ್ ಟೈಟ್ ಮಾಡಲು ಸ್ಪಾನರ್ ತೆಗೆದುಕೊಳ್ಳುತ್ತಾರೆ ವ್ಯಂಗ್ಯವಾಡಿದರು.

ಮುಸ್ಲಿಂ ಮೀಸಲಾತಿ ವಿಚಾರ:
ರಾಜ್ಯಪಾಲರಿಗೆ ಜೆಡಿಎಸ್ (JDS) ಶಾಸಕರು-ಬಿಜೆಪಿಯವರು ಒಟ್ಟಾಗಿ ದೂರು ಕೊಡಲಾಗಿದೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ ಜೊತೆ ಒಟ್ಟಾಗಿ ಹೋಗುತ್ತೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ. ಈಗಾಗಲೇ ಕುಮಾರಸ್ವಾಮಿ (HD Kumraswamy) ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಧರ್ಮಾಧಾರಿತ ಮೀಸಲಾತಿಗೆ (Religion Reservation) ಅವಕಾಶ ಇಲ್ಲ. ಹಿಂದುಳಿದ ಸಮುದಾಯಗಳು ಇವೆ. ಮುಸ್ಲಿಮರಿಗೆ ಯಾಕೆ ವಿಶೇಷವಾಗಿ ಮೀಸಲಾತಿ ಕೊಟ್ಟಿದ್ದೀರಾ? ಇದಕ್ಕೆ ನಮ್ಮ ವಿರೋಧ ಇದೆ. ಕಾಂಗ್ರೆಸ್ ಒಲೈಕೆ ರಾಜಕೀಯ ಬಿಡಬೇಕು ಎಂದು ಕಿಡಿಕಾರಿದರು.

ಹನಿಟ್ರ‍್ಯಾಪ್ ವಿಚಾರ:
ನಾನು ಒಬ್ಬ ಯುವಕನಾಗಿ ಹೊಸದಾಗಿ ರಾಜಕೀಯಕ್ಕೆ ಬರುತ್ತಿದ್ದೇನೆ. ನನ್ನಂತ ಎಷ್ಟೋ ಯುವಕರು ರಾಜಕೀಯಕ್ಕೆ ಬರಬೇಕು ಎಂದು ಬಯಕೆ ಇಟ್ಟುಕೊಂಡಿದ್ದಾರೆ. ವಿಧಾನಸೌಧದ ಒಳಗೆ ಅನೇಕ ಪುಣ್ಯಾತ್ಮರು ಆಡಳಿತ ಕೊಟ್ಟಿದ್ದಾರೆ. ಇಂತಹ ದೇವಾಲಯದಲ್ಲಿ ಬೆಳಗ್ಗೆ ಮನಿ, ಸಂಜೆ ಹನಿ ಆಗ್ತಿದೆ. ಈ ಸರ್ಕಾರ ಮನಿ-ಹನಿ ಸರ್ಕಾರ ಆಗಿದೆ. ಸದನದ ಒಳಗೆ ರಾಜಣ್ಣ ಅವರು ಆರೋಪ ಮಾಡಿದ್ದರು. ಕ್ಯಾಬಿನೆಟ್ ಸಚಿವರಿಗೆ ರಕ್ಷಣೆ ಇಲ್ಲ. ಬೇರೆ ಅವರ ಕಥೆ ಏನು? 48 ಜನರದ್ದು ಇದೆ ಎಂದು ಹೇಳ್ತಾರೆ. ಸ್ಪಷ್ಟ ನಿರ್ಧಾರ ಮಾಡಿ. ಮೊದಲು ದೂರು ಕೊಡಿ. ಒಂದು ಕುರ್ಚಿಗೋಸ್ಕರ ಈ ಮಟ್ಟಕ್ಕೆ ರಾಜಕೀಯ ಮಾಡ್ತಿದ್ದಾರೆ. ಸಿಡಿ ಫ್ಯಾಕ್ಟರಿ ಮಾಲೀಕರ ಯಾರು? ಎಳೂವರೆ ಕೋಟಿ ಮಹಾನ್ ವ್ಯಕ್ತಿ ಯಾರು? ಇಷ್ಟು ಸಿಡಿ ಮಾಡಿಸಿದ ಪುಣ್ಯಾತ್ಮ ಯಾರು ಅಂತ ಜನ ತಿಳಿಯಲು ಕಾಯುತ್ತಿದ್ದಾರೆ. ರಾಜಣ್ಣ ಅವರೇ ದೂರು ಕೊಡಿ. ಯಾಕೆ ಸತಾಯಿಸುತ್ತೀರಾ ಎಂದರು.ಇದನ್ನೂ ಓದಿ:ರಾಜಣ್ಣ ದೂರು ಕೊಡಬೇಕಲ್ಲವಾ? ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ: ಪರಮೇಶ್ವರ್

 

Share This Article