ವಿಜಯ್‌ ಸೇತುಪತಿಗೆ ‘ಅಪ್ಪು’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್- ಜೂನ್‌ನಿಂದ ಶೂಟಿಂಗ್‌ ಶುರು

Public TV
1 Min Read

ತೆಲುಗಿನ ಡ್ಯಾಷಿಂಗ್‌ ಡೈರೆಕ್ಟರ್‌ ಪುರಿ ಜಗನ್ನಾಥ್ (Puri Jagannath) ಮೊದಲ ಬಾರಿಗೆ ವಿಜಯ್ ಸೇತುಪತಿ (Vijay Sethupathi) ಜೊತೆ ಕೈ ಜೋಡಿಸಿದ್ದಾರೆ. ಕನ್ನಡದ ‘ಅಪ್ಪು’ ಚಿತ್ರದ ನಿರ್ದೇಶಕ ಪುರಿ ಜಗನ್ನಾಥ್‌ ತಮ್ಮ ಮುಂದಿನ ಚಿತ್ರದ ಬಗ್ಗೆ ಬಿಗ್‌ ಅಪ್‌ ಕೊಟ್ಟಿದ್ದಾರೆ. ಇದನ್ನೂ ಓದಿ:L2: Empuraan ವಿವಾದ- ನನ್ನ ಮಗನನ್ನ ಬಲಿಪಶುವನ್ನಾಗಿ ಮಾಡಲಾಗಿದೆ: ಪೃಥ್ವಿರಾಜ್ ಸುಕುಮಾರನ್ ತಾಯಿ

ಬಹಳ ದಿನಗಳಿಂದಲೂ ಈ ಡೆಡ್ಲಿ ಕಾಂಬಿನೇಷನ್‌ ಒಂದಾಗಲಿದೆ ಎಂಬ ಮಾತು ಕೇಳಿ ಬಂದಿತ್ತು. ಅದರಂತೆ ಇದೀಗ ಪುರಿ ಜಗನ್ನಾಥ್‌ ತಮ್ಮ ಮುಂದಿನ ಚಿತ್ರವನ್ನು ವಿಜಯ್‌ ಸೇತುಪತಿ ಜೊತೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ವಿಜಯ್‌ ಸೇತುಪತಿಯವರಿಗಾಗಿಯೇ ನಿರ್ದೇಶಕ ಒಂದೊಳ್ಳೆ ಅದ್ಭುತ ಕಥೆಯನ್ನು ಸಿದ್ಧಪಡಿಸಿಕೊಂಡಿದ್ದು, ಹಿಂದೆಂದೂ ಕಾಣದ ಲುಕ್‌ನಲ್ಲಿ ಅವರನ್ನು ಪ್ರೇಕ್ಷಕರಿಗೆ ತೋರಿಸಲಿದ್ದಾರೆ. ಇದನ್ನೂ ಓದಿ:ಬೆಡ್‌ರೂಮ್ ಫೋಟೋ ಹಂಚಿಕೊಂಡ ‘ಗಿಲ್ಲಿ’ ನಟಿ ರಕುಲ್

 

View this post on Instagram

 

A post shared by Puri Connects (@puriconnects)


ಪುರಿ ಕನೆಕ್ಟ್ಸ್‌ ಬ್ಯಾನರ್‌ ನಡಿ ಪುರಿ ಜಗನ್ನಾಥ್‌ ಹಾಗೂ ಚಾರ್ಮಿ ಕೌರ್‌ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದು ಪ್ಯಾನ್‌ ಇಂಡಿಯಾ ಪ್ರಾಜೆಕ್ಟ್‌ ಆಗಿದ್ದು, ಜೂನ್‌ ತಿಂಗಳಿನಿಂದ ಚಿತ್ರೀಕರಣ ಶುರುವಾಗಲಿದೆ. ಇತ್ತೀಚೆಗೆ ವಿಜಯ್‌ ಸೇತುಪತಿ ಅಭಿನಯದ ‘ಮಹಾರಾಜ’ ಸಿನಿಮಾ ಬಾಕ್ಸಾಫೀಸ್‌ ನಲ್ಲಿ ದಾಖಲೆ ಬರೆದಿತ್ತು. ಹೀಗಾಗಿ ಸೇತುಪತಿ ಮುಂದಿನ ಪ್ರಾಜೆಕ್ಟ್‌ ಏನು ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

Share This Article