ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಸದ್ಯಕ್ಕಿಲ್ಲ: ಬೋಸರಾಜು

Public TV
1 Min Read

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಸದ್ಯಕ್ಕೆ ಯಾವುದು ಇಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು (Bosaraju) ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ (CM Siddaramaiah) ದೆಹಲಿ ಪ್ರವಾಸದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಸಂಪುಟ ಪುನರ್ ರಚನೆ ಬಗೆಗಿನ ಚರ್ಚೆಗೆ ಪ್ರತಿಕ್ರಿಯೆ ನೀಡಿದ ಅವರು,ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಜೆಂಡಾದಲ್ಲೇ‌‌ ಇಲ್ಲ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹಗಳು ಅಷ್ಟೇ ಎಂದರು. ಇದನ್ನೂ ಓದಿ: ಚಿಕ್ಕಮಗಳೂರು: ಪಕ್ಕದ ಊರಿಗೆ ಪಾತ್ರೆ ಕೊಟ್ಟಿದ್ದಕ್ಕೆ ಬಹಿಷ್ಕಾರ – 6,000 ರೂ. ದಂಡ!

 

ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ‌ಯಾವುದು ಇಲ್ಲ. ನಾನು 55 ವರ್ಷಗಳಿಂದ ಪಕ್ಷದಲ್ಲಿ ‌ಇದ್ದೇನೆ. ಕಾಂಗ್ರೆಸ್ ‌ನಲ್ಲಿ ಎಲ್ಲಾ ಜವಾಬ್ದಾರಿ ಪಡೆದುಕೊಂಡು ಬಂದಿದ್ದೇನೆ. ಏನೇ ಬದಲಾವಣೆ ಆಗಬೇಕಾದ್ರೆ ಸಮಯ ಬಂದಾಗ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ನೇಣಿಗೆ ಶರಣು

ಕೆಪಿಸಿಸಿ ಬದಲಾವಣೆ ಸದ್ಯದ ಸ್ಥಿತಿಯಲ್ಲಿ ಇಲ್ಲ. ಸಚಿವ ಸಂಪುಟ ಪುನರ್ ರಚನೆ ಕೂಡಾ ಇಲ್ಲ. ಇದನ್ನ ಸಿಎಂ ಕೂಡಾ ಹೇಳಿದ್ದಾರೆ. ಸಿಎಂ ಅವರು ರಾಜ್ಯದ ಬಗ್ಗೆ, ಪಕ್ಷದ ಬಗ್ಗೆ ಹೈಕಮಾಂಡ್ ‌ಜೊತೆ ಮಾತಾಡಿದ್ದಾರೆ. ರಾಜ್ಯದ ಸ್ಥಿತಿ ಬಗ್ಗೆ ಅವರಿಗೆ ತಿಳಿಸಿರುತ್ತಾರೆ. ಪಕ್ಷದ ವಿಷಯ ‌ಮಾತ್ರ ಹೈಕಮಾಂಡ್ ಬಳಿ ಸಿಎಂ ಚರ್ಚೆ ಮಾಡಿರುತ್ತಾರೆ ಎಂದು  ಸ್ಪಷ್ಟಪಡಿಸಿದರು.

 

Share This Article