ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದು ಹೇಗೆ?- ಬಂಡೀಪುರದ ಎಸಿಎಫ್ ಸ್ಪಷ್ಟನೆ

By
1 Min Read

ಚಾಮರಾಜನಗರದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ (Himavad Gopalaswamy Betta) ಮಲಯಾಳಂ (Mollywood0 ಚಿತ್ರೀಕರಣಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬಂಡೀಪುರ ಎಸಿಎಫ್ ನವೀನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಚಿತ್ರತಂಡಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಆದರೆ ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಆಗಲಿದೆ ಎಂದು ಎಸಿಎಫ್ ನವೀನ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:ಏ.22ರಿಂದ ಜ್ಯೂ.ಎನ್‌ಟಿಆರ್, ಪ್ರಶಾಂತ್ ನೀಲ್ ಸಿನಿಮಾದ ಶೂಟಿಂಗ್ ಶುರು

ನಮ್ಮಿಂದ ಚಿತ್ರತಂಡ ಅನುಮತಿ ಪಡೆದಿಲ್ಲ. ಏ.8ರಂದೇ ರಾಜ್ಯ ಸರ್ಕಾರದಿಂದ ನೇರವಾಗಿ ಅನುಮತಿ ಪಡೆದು ಮಲಯಾಳಂ ಚಿತ್ರತಂಡ ಚಿತ್ರೀಕರಣ (Shooting) ಮಾಡಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಎರಡು ವಾಹನಗಳಿಗೆ ಮಾತ್ರ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಚಿತ್ರತಂಡ ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತೀವ್ರ ವಿವಾದದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ಬಂಡೀಪುರವು ರಾಜ್ಯದ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯವಾಗಿದೆ. ಪರಿಸರ ಸೂಕ್ಷ್ಮ ವಲಯದಲ್ಲಿ ಸಿನಿಮಾ ಶೂಟಿಂಗ್‌ಗೆ ಸರ್ಕಾರ ಹಾಗೂ ಅರಣ್ಯ ಇಲಾಖೆ ಅನುಮತಿ ನೀಡಿದ್ದು, ಮಲಯಾಳಂ ಸಿನಿಮಾದ ಚಿತ್ರೀಕರಣ ನಡೆದಿದೆ. ಇದೀಗ ಪರಿಸರ ಸೂಕ್ಷ್ಮ ವಲಯದಲ್ಲಿ ಹೇಗೆ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದಾರೆ? ರಾಜ್ಯ ಸರ್ಕಾರ, ಬಂಡೀಪುರವನ್ನು ಕೇರಳ ಸರ್ಕಾರಕ್ಕೆ ಒತ್ತೆ ಇಡ್ತಿದ್ಯಾ ಎಂದು ಪ್ರಶ್ನಿಸುವ ಮೂಲಕ ಸ್ಥಳೀಯರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದರು. ಈ ಬೆನ್ನಲ್ಲೇ ಎಸಿಎಫ್ ನವೀನ್ ಕುಮಾರ್ ಕ್ಲ್ಯಾರಿಟಿ ನೀಡಿದ್ದಾರೆ.

Share This Article