ಇಂದು ಆರ್‌ಸಿಬಿ-ಪಂಜಾಬ್‌ ಮುಖಾಮುಖಿ – ಸೇಡು ತೀರಿಸಿಕೊಳ್ಳಲು ಬೆಂಗಳೂರು ರಣಕಲಿಗಳ ಕಾತರ!

Public TV
2 Min Read

ಮಲ್ಲನ್‌ಪುರ್‌: ಸೂಪರ್‌ ಸಂಡೇ ಇಂದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸೋಲಿನ ಸರಪಣಿ ಮತ್ತೆ ಮುಂದುವರಿದಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲು ಅನುಭವಿಸುವ ಮೂಲಕ ತವರಿನಲ್ಲಿ ಹ್ಯಾಟ್ರಿಕ್‌ ಸೋಲು ಕಂಡ ಆರ್‌ಸಿಬಿ ಇಂದು ಪಂಜಾಬ್‌ಗೆ ತವರಿನಲ್ಲೇ ಬಗ್ಗು ಬಡಿಯಲು ಕಾತರದಿಂದ ಕಾಯುತ್ತಿದೆ.

18ನೇ ಆವೃತ್ತಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಬಾರಿಗೆ ಪರಾಭವಗೊಂಡಿದೆ. ಹೀಗಾಗಿ 3ನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಸ್ಥಾನಕ್ಕೆ ಕುಸಿದಿದೆ. ಇನ್ನು 4ನೇ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ಆಡಿರುವ 7 ಪಂದ್ಯಗಳ ಪೈಕಿ 5 ಗೆಲುವಿನೊಂದಿಗೆ 10 ಅಂಕ ಪಡೆದು 2ನೇ ಸ್ಥಾನಕ್ಕೆ ಜಿಗಿದಿದೆ. ಇದನ್ನೂ ಓದಿ: ʻಈ ಸಲ ಕಪ್‌ ನಮ್ದೇʼ ಅಂತ ಹೇಳಬೇಡಿ, ಹೇಳಿದಾಗೆಲ್ಲ ತೊಂದ್ರೆ ಆಗುತ್ತೆ: ಅನಿಲ್‌ ಕುಂಬ್ಳೆ

Punjab Kings 2

ಆರ್‌ಸಿಬಿ ಸೋಲಿಗೆ ಮಳೆ ಕಾರಣವೇ?
ಶುಕ್ರವಾರದ ಮಳೆಯಿಂದಾಗಿ ಅಚಡಣೆಗೊಳಗಾದ ಪಂದ್ಯವನ್ನು 14 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಆದಾಗ್ಯೂ ಟಿಮ್‌ ಡೇವಿಡ್‌ (Tim David) ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ನೀಡಿದ್ದ 96 ರನ್‌ಗಳ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ ಇನ್ನೂ 11 ಎಸೆತಗಳು ಬಾಕಿ ಉಳಿದಿರುವಂತೆ 5 ವಿಕೆಟ್ ಕಳೆದುಕೊಂಡು ತಲುಪಿತು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!

ಪಂಜಾಬ್ ತಂಡದ ಮೊದಲೆರಡು ವಿಕೆಟ್‌ಗಳು 32 ರನ್ ಗಳಿಗೆ ಉರುಳಿದಾಗ ಆರ್‌ಸಿಬಿ ಗೆಲುವಿನ ಆಸೆಯಲ್ಲಿತ್ತು. ಬಳಿಕ 53 ರನ್ ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಾಗಲೂ ಗೆಲ್ಲುವ ಅವಕಾಶವಿತ್ತು. ಆದರೆ ಅಂತಿಮ ಹಂತದಲ್ಲಿ ನೇಹಾಲ್ ವಧೇರಾ ಕೇವಲ 19 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್ ಗಳನ್ನೊಳಗೊಂಡ ಅಜೇಯ 33 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು. ಆರ್‌ಸಿಬಿ ಪರ ಜೋಶ್ ಹೇಜಲ್ವುಡ್ 3 ವಿಕೆಟ್ ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಕಬಳಿಸಿದ್ದರು. ಇನ್ನೂ ಸ್ಫೋಟಕ ಪ್ರದರ್ಶನ ನೀಡಿ, 2 ಕ್ಯಾಚ್‌ ಪಡೆದಿದ್ದ ಆರ್‌ಸಿಬಿ ಟಿಂ ಡೇವಿಡ್‌ಗೆ ತಂಡ ಸೋತ ಹೊರತಾಗಿಯೂ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಲೀಕ್‌ – ಗಂಭೀರ್‌ ಆಪ್ತ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

Share This Article