ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ – ಶಿವಮೊಗ್ಗದ ಉದ್ಯಮಿ ಸಾವು, 12 ಮಂದಿಗೆ ಗಾಯ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ದಾಳಿಯಲ್ಲಿ ಇತರ 12 ಜನ ಗಾಯಗೊಂಡಿದ್ದಾರೆ.

ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.

ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಮಂಜುನಾಥ್ ಕುಟುಂಬಸ್ಥರು ತೆರಳಿದ್ದರು. ದಾಳಿಯಲ್ಲಿ ಸ್ಥಳದಲ್ಲೇ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಪುತ್ರರನ್ನ ರಕ್ಷಿಸಿ ಸ್ಥಳೀಯರು ಬೇರೆಡೆ ಕರೆದುಕೊಂಡು ಬಂದಿದ್ದಾರೆ.

Share This Article