ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರ್ಯಾಕ್ಟರ್, ಓರ್ವ ಕಾರ್ಮಿಕ ಸಾವು, 8 ಜನರಿಗೆ ಗಾಯ

Public TV
1 Min Read

ಬಳ್ಳಾರಿ: ಟ್ರಾಕ್ಟರ್ (Tractor) ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟು, 8 ಜನರಿಗೆ ಗಾಯಗಳಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ (Kudligi) ತಾಲೂಕಿನ ನಾಗಲಾಪುರ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕ ಜ್ಯೋತಿಲಾಲ್ ತುಡು (35) ಸಾವನ್ನಪ್ಪಿದ್ದಾರೆ. ವಿಂಡ್ ಫ್ಯಾನ್‌ ಕೆಲಸಕ್ಕೆಂದು ಬಂದಿದ್ದ ಬಿಹಾರ ಹಾಗೂ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಟ್ರಾಕ್ಟರ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ

 

ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಕೈ, ಕಾಲು ಮುರಿದಿದ್ದು, ಗಂಭೀರ ಗಾಯಗಳಾಗಿವೆ. ಉಳಿದಂತೆ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗ್ತಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article