ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

By
1 Min Read

ಬೆಂಗಳೂರು: ಜಮೀರ್ ಪಾಕಿಸ್ತಾನಕ್ಕೆ ಹೋಗಿ ಸೂಸೈಡ್ ಬಾಂಬರ್ ಆಗುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ಮಾಜಿ ಸಿಎಂ ಸದಾನಂದಗೌಡ (Sadanand Gowda) ಅವರು ಕಿಡಿಕಾರಿದ್ದಾರೆ.ಇದನ್ನೂ ಓದಿ: ಜಮೀರ್ ಸುಮ್ಮನಿದ್ರೆ ಅದೇ ದೊಡ್ಡ ಸೇವೆ: ಜೋಶಿ

- Advertisement -

- Advertisement -

ಪ್ರಧಾನಿ ಮೋದಿ, ಅಮಿತ್ ಶಾ ಅವಕಾಶ ಕೊಟ್ಟರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗುತ್ತೇನೆ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಭಾಗದಲ್ಲಿ ಯಕ್ಷಗಾನಕ್ಕೆ ಮೊದಲು ಒಬ್ಬ ಹಾಸ್ಯಗಾರ ಬರುತ್ತಾರೆ. ಜನರನ್ನು ರಂಜಿಸಲು ಅವರು ಬರುತ್ತಾರೆ. ಆ ಹಾಸ್ಯಗಾರರಿಗಿಂತ ಕೆಳಗೆ ಇರುವವರು ಈ ಜಮೀರ್ ಎಂದು ವ್ಯಂಗ್ಯ ನುಡಿದಿದ್ದಾರೆ.

- Advertisement -

ಅವರು ಪಾಕಿಸ್ತಾನಕ್ಕೆ ಹೋಗಿ ಬಾಂಬ್ ಹಾಕಬೇಕಿಲ್ಲ. ಅವರ ಕ್ಷೇತ್ರದಲ್ಲಿ ಅವರು ಆತ್ಮಾಹುತಿ ಬಾಂಬರ್ ಆಗಲಿ. ಜಮೀರ್ ಪಾಕಿಸ್ತಾನದ ವಿರುದ್ಧ ಆತ್ಮಾಹುತಿ ಬಾಂಬರ್ ಆದರು ಎಂದು ಜಗತ್ತಿಗೆ ಒಂದು ಸಂದೇಶ ಹೋಗಲಿ. ಸುಮ್ಮನೆ ಮನರಂಜನೆಗೆ ಮಾತನಾಡುವುದು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಸುಹಾಸ್ ಹತ್ಯೆ ಕೇಸ್ – ಫಾಝಿಲ್ ಸಹೋದರನೇ ಪ್ರಮುಖ ಆರೋಪಿ

- Advertisement -

Share This Article