ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್‌ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ

Public TV
1 Min Read

– ಎಲ್‌ಒಸಿಯಲ್ಲಿ ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ

ನವದೆಹಲಿ: ಪಾಕಿಸ್ತಾನ (Pakistan) ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಸತತ 10ನೇ ಬಾರಿ ಎಲ್‌ಒಸಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತ (India) ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.

ಪಾಕಿಸ್ತಾನಿ ಪಡೆಗಳು ಗಡಿಯಲ್ಲಿ ಹಲವಾರು ಸ್ಥಳಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿವೆ ಎಂದು ಭಾರತೀಯ ಸೇನೆ ಭಾನುವಾರ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್ ಎದುರು ಪ್ರದೇಶಗಳಲ್ಲಿ ಎಲ್‌ಒಸಿಯಾದ್ಯಂತ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕುಮ್ಮಕ್ಕು ನೀಡಿದ್ದಕ್ಕಾಗಿ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ಕ್ರಮಗಳ ಸರಣಿಯನ್ನು ಭಾರತ ಮುಂದುವರಿಸಿದೆ. ಪಾಕಿಸ್ತಾನದಿಂದ ಎಲ್ಲಾ ನೇರ ಮತ್ತು ಪರೋಕ್ಷ ಆಮದುಗಳು, ಒಳಬರುವ ಪಾರ್ಸೆಲ್‌ಗಳನ್ನು ನಿಷೇಧಿಸಿತು. ಪಾಕ್‌ನಿಂದ ಬರುವ ಮತ್ತು ದೇಶದಿಂದ ಹೋಗುವ ಹಡಗುಗಳಿಗೂ ನಿಷೇಧ ವಿಧಿಸಿತು.

ಅಂಗೋಲಾ ಅಧ್ಯಕ್ಷ ಜೊವೊ ಲೌರೆಂಕೊ ಅವರೊಂದಿಗಿನ ಮಾತುಕತೆಯ ನಂತರ, ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುವ ಭಾರತದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ನೀಡಿದ ಬೆಂಬಲಕ್ಕಾಗಿ ಆಫ್ರಿಕನ್ ರಾಷ್ಟ್ರಕ್ಕೆ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ಕರಾವಳಿಯಲ್ಲಿ `OP TRIGGER’ ಆಪರೇಷನ್ – ಕಡಲಿನಲ್ಲಿ ಕಟ್ಟೆಚ್ಚರ

Share This Article