ʻಆಪರೇಷನ್‌ ಸಿಂಧೂರʼ ಯಶಸ್ವಿ ಹಿನ್ನೆಲೆ ನಿಮಿಷಾಂಭ ದೇಗುಲದಲ್ಲಿ ವಿಶೇಷ ಪೂಜೆ

Public TV
1 Min Read

ಮಂಡ್ಯ: ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ (Operation Sindoor) ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲ್ಲೆ, ಕರ್ನಾಟಕ ಸರ್ಕಾರವು (Karnataka Government) ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ಮಾಡಲು ಆದೇಶಿಸಿದೆ.

ಸಚಿವ ರಾಮಲಿಂಗಾರೆಡ್ಡಿ ಅವರು ಭಾರತೀಯ ಸೇನೆಗೆ ಶುಭ ಹಾರೈಸಿದ್ದಾರೆ ಮತ್ತು ಯೋಧರಿಗೆ ಒಳಿತಾಗಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇಗುಲದಲ್ಲಿ (Nimishambha Temple) ಸೈನಿಕರ ಹೆಸರಲ್ಲಿ ಪೂಜೆ ಸಲ್ಲಿಸಲಾಗಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

ರಾಜ್ಯದ ಪ್ರಸಿದ್ಧ ದೇಗುಲದಲ್ಲಿ ಒಂದಾದ ಮಂಡ್ಯ ಜಿಲ್ಲೆಯ ನಿಮಿಷಾಂಭ ದೇಗುಲದಲ್ಲಿ ಇಂದು ಮುಂಜಾನೆ ಸೈನಿಕರಿಗಾಗಿ ದೇವಿಗೆ ಮೊದಲ ಪೂಜೆ ಸಲ್ಲಿಕೆ ಮಾಡಲಾಗಿದೆ. ದೇವಸ್ಥಾನದ ಮುಖ್ಯ ಅರ್ಚಕರು ಸೈನಿಕರಿಗಾಗಿ ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್‌ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

ದೇಶಕಾಯುವ ಯೋಧರಿಗೆ ಯಾವುದೇ ತೊಂದರೆ ಆಗದಂತೆ ಕಾಪಾಡುವಂತೆ ಪ್ರಾರ್ಥಿಸಿ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್‌ – ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ

Share This Article