ಬೈಕ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ – ಮೂವರು ಬಾಲಕರು ದುರ್ಮರಣ

Public TV
1 Min Read

ಬಾಗಲಕೋಟೆ: ಡಿಜೆ ನೋಡಿಕೊಂಡು ಬರಲು ಬೈಕ್‌ನಲ್ಲಿ ಹೋದ ಮೂವರು ಬಾಲಕರು ಲಾರಿಯಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬಾಗಲಕೋಟೆ(Bagalkote) ತಾಲೂಕಿನ ಸಿಮೀಕೇರಿ ಕ್ರಾಸ್ ಬಳಿಯ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ನಿವಾಸಿಗಳಾದ ಸಿದ್ದು ರಾಜು ಗಣಿ(16), ಸಂತೋಷ ಕೂಡಗಿ(16), ಕಾಮಣ್ಣ ಕುಪಲಿ(16) ಮೃತ ಬಾಲಕರು. ಇದನ್ನೂ ಓದಿ: ಆಪರೇಷನ್ ಸಿಂಧೂರ – ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಸಾವು

ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂವರು ಬಾಲಕರು ಬೈಕ್‌ನಲ್ಲಿ ಎಡ ಬದಿಯಿಂದ ಲಾರಿಯೊಂದನ್ನು ಓವರ್‌ಟೇಕ್ ಮಾಡಲು ಹೋಗಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದ ಬಾಲಕರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಕಾರ್ಮಿಕರಿಗೆ ಬಿಎಂಟಿಸಿ ಬಸ್ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

ಒಂದೇ ಬೈಕ್‌ನಲ್ಲಿ ಮೂವರು ಬಾಲಕರು ತ್ರಿಬಲ್ ರೈಡಿಂಗ್ ಮಾಡಿದ್ದು, ಯಾರೂ ಕೂಡಾ ಹೆಲ್ಮೆಟ್ ಧರಿಸಿರಲಿಲ್ಲ. ಎಡ ಬದಿಯಿಂದ ಲಾರಿಯನ್ನು ಓವರ್‌ಟೇಕ್ ಮಾಡಲು ಹೋಗಿ ಮೂವರು ಜೀವ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಯುದ್ಧವು ದೇಶದ ಖ್ಯಾತಿಗೆ ಒಳ್ಳೆಯದಲ್ಲ: ‘ಆಪರೇಷನ್ ಸಿಂಧೂರ’ ಬಗ್ಗೆ ಸಂಜನಾ ಗಲ್ರಾನಿ ಪೋಸ್ಟ್

ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article