ಉಗ್ರರ ಪೋಷಕ ಪಾಕಿಸ್ತಾನಕ್ಕೆ ಮತ್ತೆ ಬೆಂಬಲ ಘೋಷಿಸಿದ ಚೀನಾ

Public TV
1 Min Read

– ಪಾಕ್‌ಗೆ ಚೀನಾ ದೃಢವಾಗಿ ನಿಲ್ಲುವುದು ಮುಂದುವರಿಯುತ್ತದೆ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

ಬೀಜಿಂಗ್: ಭಯೋತ್ಪಾದನೆ ಪೋಷಕ ಪಾಕಿಸ್ತಾನಕ್ಕೆ ಚೀನಾ (China) ಮತ್ತೆ ಬೆಂಬಲ ವ್ಯಕ್ತಪಡಿಸಿದೆ. ಪಾಕಿಸ್ತಾನದ (Pakistan) ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ರಾಷ್ಟ್ರೀಯ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವಲ್ಲಿ ತನ್ನ ದೇಶವು ಪಾಕಿಸ್ತಾನದ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ (Wang Yi) ಹೇಳಿಕೆ ನೀಡಿದ್ದಾರೆ.

ನನ್ನ ಜೊತೆಗೆ ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಚೀನಾದ ವಿದೇಶಾಂಗ ಸಚಿವರು ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪಾಕ್‌ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ತಿಳಿಸಿದ್ದಾನೆ.‌ ಇದನ್ನೂ ಓದಿ: ನಾಗ್ರೋಟಾದಲ್ಲಿ ಭಾರತೀಯ ಸೇನೆ & ಉಗ್ರರ ನಡುವೆ ಗುಂಡಿನ ಚಕಮಕಿ

ಸಂಭಾಷಣೆಯ ಸಮಯದಲ್ಲಿ ವಾಂಗ್ ಯಿಗೆ ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ದಾರ್‌ ವಿವರಿಸಿದ್ದಾನೆ. ಸವಾಲಿನ ಸಂದರ್ಭಗಳಲ್ಲಿ ಪಾಕಿಸ್ತಾನ ಸಂಯಮ ಮತ್ತು ಅದರ ಜವಾಬ್ದಾರಿಯುತವಾಗಿ ವರ್ತಿಸಿದೆ ಎಂದು ಚೀನಾದ ವಾಂಗ್‌ ಯಿ ಮಾತನಾಡಿದ್ದಾರೆ.

ಪ್ರತ್ಯೇಕವಾಗಿ, ದಾರ್ ಮತ್ತು ಯುಎಇ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅವರೊಂದಿಗೆ ಮಾತನಾಡಿದ್ದಾನೆ. ಪಾಕಿಸ್ತಾನ ಮತ್ತು ಭಾರತ ನಡುವಿನ ಕದನ ವಿರಾಮ ಒಪ್ಪಂದವನ್ನು ಸ್ವಾಗತಿಸಿದ್ದಾನೆ ಎನ್ನಲಾಗಿದೆ. ಟರ್ಕಿಯ ವಿದೇಶಾಂಗ ಸಚಿವ ಹಕನ್ ಫಿಡಾನ್ ಜೊತೆಗೆ ದಾರ್ ಮಾತನಾಡಿ, ಈ ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಅವರಿಗೆ ತಿಳಿಸಿದ್ದಾನೆ. ಇದನ್ನೂ ಓದಿ: ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ – BSF ಯೋಧ ಹುತಾತ್ಮ

ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ರಷ್ಯಾ, ಇಸ್ರೇಲ್‌, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ. ಆದರೆ, ಚೀನಾ ಮತ್ತು ಟರ್ಕಿ ಮಾತ್ರ ಪಾಕಿಸ್ತಾನ ಪರ ಬೆಂಬಲ ಘೋಷಿಸಿವೆ.

Share This Article