ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

By
1 Min Read

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ(Suhas Shetty) ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು(Bajpe Police) ಬುಧವಾರ ಬಂಧಿಸಿದ್ದಾರೆ.

- Advertisement -

ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತ ಆರೋಪಿಗಳು. ಇದನ್ನೂ ಓದಿ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

- Advertisement -

- Advertisement -

ಬಂಧಿತ ಆರೋಪಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆಯೇ 3 ಕಳವು ಪ್ರಕರಣ ದಾಖಲಾಗಿತ್ತು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ ಕೊಲೆಗೆ ಸಹಕರಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

- Advertisement -

ಆರೋಪಿ ಅಬ್ದುಲ್ ಖಾದರ್ ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗಲು ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿದ್ದ. ನೌಷದ್ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರೆ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿತ್ತು. ಇದನ್ನೂ ಓದಿ: Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಆರೋಪಿ ಅಜರುದ್ದೀನ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅಬ್ದುಲ್ ಖಾದರ್ ಹಾಗೂ ನೌಷದ್ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇದನ್ನೂ ಓದಿ: ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

ಮೇ 1ರಂದು ಬಜಪೆಯ ಕಿನ್ನಿಪದವು(Kinnipadavu) ಬಳಿ ರಾತ್ರಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

Share This Article