ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

Public TV
2 Min Read

ಬೆಂಗಳೂರು: ಭಾರತ-ಪಾಕಿಸ್ತಾನ ಕದನ ವಿರಾಮದ ಬಳಿಕ ನಾಳೆಯಿಂದ ಐಪಿಎಲ್ ಮತ್ತೆ ಆರಂಭವಾಗುತ್ತಿದೆ. ಎಂ.ಚಿನ್ನಸ್ವಾಮಿ ಸ್ಟೇಡಿಯಂ (M Chinnaswamy Stadium) ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ.

ಭಾರತ-ಪಾಕ್ ಉದ್ವಿಗ್ನತೆಯಿಂದಾಗಿ ಮೇ 8ರಂದು ಐಪಿಎಲ್ (IPL) ಸ್ಥಗಿತಗೊಂಡಿತ್ತು. ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಆರಂಭವಾಗುತ್ತಿದ್ದು, ಮೇ 17ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ (RCB) ಹಾಗೂ ಕೆಕೆಆರ್ (KKR) ತಂಡಗಳು ಮುಖಾಮುಖಿಯಾಗಲಿವೆ.ಇದನ್ನೂ ಓದಿ: ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ

ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರಿ ಪೊಲೀಸರು ಅಲರ್ಟ್ ಘೋಷಿಸಿದ್ದು, ಟ್ರಾಫಿಕ್ ತಡೆಗಟ್ಟಲು ಹಲವು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ.

ಪಂದ್ಯ ವೀಕ್ಷಿಸಲು ಬರುವವರಿಗೆ ಪಾರ್ಕಿಂಗ್‌ಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್‌ಪ್ ಮತ್ತು ಡ್ರಾಪ್ ಮಾಡಲು ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಪಾರ್ಕಿಂಗ್ ಕೊರತೆಯಿರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಮನವಿ ಮಾಡಲಾಗಿದೆ.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?
1. ಕ್ವೀನ್ಸ್ ರಸ್ತೆ- ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
2. ಎಂ.ಜಿ ರಸ್ತೆ- ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ
3. ಲಿಂಕ್ ರಸ್ತೆ- ಎಂ.ಜಿ ರಸ್ತೆಯಿಂದ ಕಬ್ಬನ್ ಪಾರ್ಕ್ ರಸ್ತೆವರೆಗೆ
4. ರಾಜಭವನ ರಸ್ತೆ- ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
5. ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ
6. ಕಬ್ಬನ್ ರಸ್ತೆ- ಸಿ.ಟಿ.ಓ. ವೃತ್ತದಿಂದ ಡಿಕೆನ್ ಸನ್ ರಸ್ತೆ ಜಂಕ್ಷನ್‌ನ ರಸ್ತೆಯ ಎರಡೂ ಕಡೆ
7. ಸೆಂಟ್ ಮಾರ್ಕ್ಸ್ ರಸ್ತೆ- ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
8. ಮ್ಯೂಸಿಯಂ ರಸ್ತೆ-,ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ
9. ಕಸ್ತೂರಬಾ ರಸ್ತೆ- ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ
10. ಮಲ್ಯ ಆಸ್ಪತ್ರೆ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
11. ಕಬ್ಬನ್‌ಪಾರ್ಕ್ ಒಳಭಾಗ- ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ
11. ಲ್ಯಾವೆಲ್ಲಿ ರಸ್ತೆ- ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ
12. ವಿಠಲ್ ಮಲ್ಯ ರಸ್ತೆ- ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕಿಯರ ಶಾಲೆಯವರೆಗೆ

ಪಾರ್ಕಿಂಗ್ ವ್ಯವಸ್ಥೆ:
1. ಪಂದ್ಯ ವೀಕ್ಷಣೆ ಮಾಡಲು ಬರೋರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್, ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್
3. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳಿಗೆ ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನ.ಇದನ್ನೂ ಓದಿ: ಕಾಂಗ್ರೆಸ್‌ನವ್ರಿಗೆ ಪಾಕ್‌ ಫ್ರೀ ವೀಸಾ ಕೊಡುತ್ತೆ, ಮಂಜುನಾಥ್ ನೋಡ್ಕೊಂಡು ಬರಲಿ: ಯತ್ನಾಳ್ ಕಿಡಿ

Share This Article