ಫೈರಿಂಗ್ ಪ್ರಕರಣ – ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ರಿಕ್ಕಿ ರೈ

Public TV
1 Min Read

ರಾಮನಗರ: ರಿಕ್ಕಿ ರೈ (Rikki Rai) ಮೇಲಿನ ಗುಂಡಿನ ದಾಳಿ ಪ್ರಕರಣ (Firing Case) ಕುರಿತು ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟೀಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ರಿಕ್ಕಿ ರೈ 20 ದಿನಗಳ ಕಾಲಾವಕಾಶ ಕೇಳಿದ್ದು, ಮೆಡಿಕಲ್ ರಿಪೋರ್ಟ್ ಕೊಟ್ಟು ಸಮಯಾವಕಾಶ ಕೇಳಿದ್ದಾರೆ ಎಂದು ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣ ಸಂಬಂಧ ಎಲ್ಲಾ ರೀತಿಯಲ್ಲೂ ತನಿಖೆ ನಡೆಯುತ್ತಿದೆ. ಕೆಲವೊಂದು ರಿಪೋರ್ಟ್‌ಗಳು ಬರಬೇಕಾಗಿದೆ, ಅದಕ್ಕಾಗಿ ಕಾಯುತ್ತಿದ್ದೇವೆ. ಈ ಎಲ್ಲಾ ವರದಿಗಳು ಬಂದ ಬಳಿಕ ಚಾರ್ಜ್‌ಶೀಟ್ ಫೈಲ್ ಮಾಡುತ್ತೇವೆ. ಜೊತೆಗೆ ರಿಕ್ಕಿ ರೈಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ. ಅವರು ಬಂದ ನಂತರ ತನಿಖೆ ಮುಂದುವರಿಸುತ್ತೇವೆ ಎಂದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಹುಟ್ಟುಹಬ್ಬ – ಮೋದಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

ಪ್ರಕರಣದಲ್ಲಿ ವಿಠಲ್ ಪ್ರಮುಖ ಆರೋಪಿಯಾಗಿದ್ದಾನೆ. ಆತನನ್ನು ದಸ್ತಗಿರಿ ಮಾಡಿ ಈಗಾಗಲೇ ಜೈಲಿಗೆ ಬಿಟ್ಟಿದ್ದೇವೆ. ಕೆಲವೊಂದು ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದೇವೆ. ಆ ವರದಿಗಳು ಬಂದ ಮೇಲೆ ಪ್ರಕರಣ ತನಿಖೆ ಚುರುಕುಗೊಳಿಸುತ್ತೇವೆ. ಸದ್ಯಕ್ಕೆ ವಿಠಲ್ ಒಬ್ಬನೇ ಕೇಸ್‌ನಲ್ಲಿ ಆರೋಪಿಯಾಗಿದ್ದಾನೆ. ರಿಕ್ಕಿ ರೈ ವಿಚಾರಣೆಗೆ ಹಾಜರಾದ ಬಳಿಕ ಮತ್ತಷ್ಟು ವಿಚಾರಗಳು ಹೊರಬರಬೇಕಿದೆ ಎಂದು ತಿಳಿಸಿದರು.‌ ಇದನ್ನೂ ಓದಿ: ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

Share This Article