ಬೆಂಗಳೂರು| 100 ವರ್ಷಗಳ ದಾಖಲೆ ಮುರಿದ ಮೇ ತಿಂಗಳ ಮಳೆ!

Public TV
1 Min Read

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ (May Month) ದಾಖಲೆಯ ಮಳೆಯಾಗಿದೆ. ನೂರು ವರ್ಷದಲ್ಲೇ ಬೆಂಗಳೂರಲ್ಲಿ (Record) ಈ ಬಾರಿ ಬಿದ್ದ ಮಳೆ ದಾಖಲೆ ಸೃಷ್ಟಿಸಿದೆ ಎಂದು ಹವಾಮಾನ ಇಲಾಖೆ (IMD) ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮೇ ತಿಂಗಳಲ್ಲೇ 307.9 ಮಿಮೀ ಮಳೆ ದಾಖಲೆಯಾಗಿದೆ. ಅದೂ ಮೇ 1 ರಿಂದ ಮೇ 26 ರವರೆಗೆ ಈ‌ ಪ್ರಮಾಣದಲ್ಲಿ ಮಳೆಯಾಗಿದೆ. 2023 ಮೇ ತಿಂಗಳಲ್ಲಿ 305.4 ಮಿಮೀ ಮಳೆ ದಾಖಲಾಗಿತ್ತು. ಇದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಕೇರಳ | ಮುಳುಗಿದ ಕಾರ್ಗೋ ಶಿಪ್‌ – ಅಲೆಯ ಅಬ್ಬರಕ್ಕೆ ತೇಲಿಬಂದ ಕಂಟೇನರ್‌; ಮುಟ್ಟದಂತೆ ಜನರಿಗೆ ಸೂಚನೆ

 

ಜೂನ್ 5 ಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇತ್ತು. ಆದರೆ ಮೇ 24ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಸಂಪೂರ್ಣ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. 2009 ರಲ್ಲಿ ಮೇ 23ಕ್ಕೆ ಕೇರಳ ಪ್ರವೇಶಿಸಿದ್ದ ಮುಂಗಾರು ಈ ಬಾರಿ ಮೇ 24ರಂದೇ ಪ್ರವೇಶ ಮಾಡಿದೆ‌. ಈ ಬಾರಿ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ ಇದೆ ಅವರು ಮಾಹಿತಿ ನೀಡಿದರು.  ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

ಬೆಂಗಳೂರಲ್ಲಿ ಇನ್ನೂ ಒಂದು ವಾರ ಸಾಧಾರಣ ಮಳೆ ಮುಂದುವರಿಯಲಿದೆ. ಗಾಳಿ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಅವರು ಹೇಳಿದರು.

Share This Article