ಮಂಗಳೂರು| ಒತ್ತಡಕ್ಕೆ ಮಣಿದು ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹಮೀದ್‌ ರಾಜೀನಾಮೆ ಘೋಷಣೆ

By
1 Min Read

– 200ಕ್ಕೂ ಅಧಿಕ ಮುಸ್ಲಿಂ ಮುಖಂಡರಿಂದ ಪಕ್ಷದ ಜವಾಬ್ದಾರಿಗಳಿಗೆ ರಾಜೀನಾಮೆ
– ಅಬ್ದುಲ್‌ ರಹಿಮಾನ್‌ ಹತ್ಯೆ ಖಂಡಿಸಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ

ಮಂಗಳೂರು: ಬಂಟ್ವಾಳದ ಅಬ್ದುಲ್ ರಹಿಮಾನ್‌ (Abdul Rahiman) ಹತ್ಯೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ಗೆ ಮುಸ್ಲಿಂ ಮುಖಂಡರ ಎಚ್ಚರಿಕೆ ಸಂದೇಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಸೇರಿ ಹಲವು ನಾಯಕರಿಂದ ರಾಜೀನಾಮೆ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರ ಬಹಿರಂಗ ಸಭೆಯಲ್ಲೇ ರಾಜ್ಯ ಮತ್ತು ಜಿಲ್ಲಾ ನಾಯಕರು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಕಾರ್ಯಕರ್ತರ ಎದುರಲ್ಲೇ ವೇದಿಕೆ ಮೇಲೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಭಾರೀ ಹೈಡ್ರಾಮದ ಬಳಿಕ ಕೊನೆಗೂ ಮುಖಂಡರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಇದನ್ನೂ ಓದಿ: ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

ಕಾಂಗ್ರೆಸ್‌ನ ಹಲವು ಘಟಕಗಳ ಮುಸ್ಲಿಂ ಮುಖಂಡರು, ಕಾರ್ಪೊರೇಟರ್‌ಗಳು, ಜಿಪಂ ಸದಸ್ಯರಿಂದ ತಮ್ಮ ಜವಾಬ್ದಾರಿಗಳಿಗೆ ರಾಜೀನಾಮೆ ಘೋಷಣೆ‌ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ 200ಕ್ಕೂ ಅಧಿಕ ಮುಸ್ಲಿಂ ಮುಖಂಡರಿಂದ ಪಕ್ಷದ ಜವಾಬ್ದಾರಿಗಳಿಗೆ ರಾಜೀನಾಮೆ ಘೋಷಣೆ ಮಾಡಲಾಗಿದೆ.

ರಾಜೀನಾಮೆಗೂ ಮೊದಲು ಮಂಗಳೂರಿನ ಶಾದಿ ಮಹಲ್ ಸಭಾಂಗಣದ ಸಭೆಯಲ್ಲಿ ಭಾರಿ ಹೈಡ್ರಾಮಾ ನಡೆಯಿತು. ಶಾಹುಲ್‌ ಹಮೀದ್‌ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದರು. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆ ರಾಜೀನಾಮೆಯನ್ನು ಮುಂದೂಡುವುದಾಗಿ ತಿಳಿಸಿದ್ದರು. ಆದರೆ, ಇದಕ್ಕೆ ಮುಸ್ಲಿಂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಇದನ್ನೂ ಓದಿ: ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

Share This Article