ಲಾರಿ, ಬೈಕ್ ನಡುವೆ ಭೀಕರ ಅಪಘಾತ – ಹಾರಿ ಹೋದ ಬೈಕ್ ಸವಾರನ ರುಂಡ

By
1 Min Read

ಮೈಸೂರು: ಲಾರಿ ಹಾಗೂ ಬೈಕ್ (Bike) ನಡುವೆ ನಡೆದ ಭೀಕರ ಅಪಘಾತದಲ್ಲಿ (Accident) ಬೈಕ್ ಸವಾರನ ತಲೆ ಕಟ್ ಆಗಿ ಹಾರಿಹೋದ ಘಟನೆ ಮೈಸೂರು (Mysuru) ಜಿಲ್ಲೆಯ ಗೊರಹಳ್ಳಿ ಕೆರೆ ಏರಿಯ ಮೇಲೆ ನಡೆದಿದೆ.

ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರನ್ನು ಶೇಖರ್ (26) ಹಾಗೂ ಶಂಕರ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ – ಮೂವರು ಆರೋಪಿಗಳ ಬಂಧನ

ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ

Share This Article