America | ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಜನರತ್ತ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿ – 6 ಮಂದಿಗೆ ಗಾಯ

By
1 Min Read

ವಾಷಿಂಗ್ಟನ್: ದುಷ್ಕರ್ಮಿಯೋರ್ವ ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ಇಸ್ರೇಲ್ (Israel) ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ (America) ಕೊಲೊರಾಡೋದ (Colorado) ಬೌಲ್ಡರ್‌ನಲ್ಲಿ ನಡೆದಿದೆ.

ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೊರಾಡೋದ ಬೌಲ್ಡರ್‌ನಲ್ಲಿ (Boulder) ಗಾಜಾದಲ್ಲಿನ ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಚರ್ಚಿಸುವ ಸಲುವಾಗಿ ಇಸ್ರೇಲ್ ನಾಗರಿಕರು ಸಭೆ ಸೇರಿದ್ದರು. ಈ ವೇಳೆ ದುಷ್ಕರ್ಮಿ ಬಾಟಲ್‌ನಲ್ಲಿ ತುಂಬಿಸಿದ್ದ ಪೆಟ್ರೋಲ್ ಬಾಂಬ್‌ಗಳನ್ನು ನಾಗರಿಕರತ್ತ ಎಸೆದು ‘ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ್ದಾನೆ. ಇದನ್ನೂ ಓದಿ: ಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಸಿಂಧನೂರು ಬಂದ್ – ರೈತರ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ

ಜನರ ಮೇಲೆ ಫೈರ್ ಬಾಂಬ್ ಎಸೆದ ವ್ಯಕ್ತಿಯನ್ನು ಮೊಹಮ್ಮದ್ ಸಬ್ರಿ ಸೊಲಿಮಾ (45) ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸೊಲಿಮಾ ಅಮೆರಿಕದಲ್ಲಿ ಪ್ಯಾಲೆಸ್ತೀನ್ ಪರ ನಡೆಯುತ್ತಿದ್ದ ಹಲವು ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಹೇಮಾವತಿ ಕೆನಾಲ್ ನಿರ್ಮಾಣ: ಪರಮೇಶ್ವರ್

ಈ ಘಟನೆಯನ್ನು ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ‘ಉದ್ದೇಶಿತ ಭಯೋತ್ಪಾದಕ ಕೃತ್ಯ’ ಎಂದು ಕರೆದಿದ್ದಾರೆ. ಅಲ್ಲದೇ ದೇಶದಲ್ಲಿ ಹೆಚ್ಚುತ್ತಿರುವ ಯಹೂದಿ ವಿರೋಧಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್| ಐವರನ್ನು ಬಂಧಿಸಿದ್ದೇವೆ: ಪರಮೇಶ್ವರ್‌

Share This Article