ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

Public TV
3 Min Read

ಶ್ರೀನಗರ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು (Chenab Bridge) ಉದ್ಘಾಟಿಸಿದರು.

ಜೊತೆಗೆ ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊಟ್ಟ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆಯನ್ನೂ (Anji bridge) ಉದ್ಘಾಟಿಸಿದರು. ಈ ವೇಳೆ ಜಮ್ಮು-ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ (Omar Abdullah) ಹಾಗೂ ರಾಜ್ಯಪಾಲ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು. ಚೆನಾಬ್‌ ಸೇತುವೆಯನ್ನು ಉದ್ಘಾಟಿಸಿದ ಬಳಿಕ ರಾಷ್ಟ್ರಧ್ವಜ ಹಿಡಿದು ಒಂದು ಸುತ್ತು ಪ್ರದಕ್ಷಿಣೆ ಹಾಕಿದರು.

ಚೆನಾಬ್‌ ಸೇತುವೆ ಬಳಿಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ಶ್ರೀನಗರ (Katra To Srinagar) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದರು. ಹಾಗೂ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ಸಹ ನಡೆಸಿದರು. ಇದನ್ನೂ ಓದಿ: ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಚಾಲನೆ ನೀಡುವ ಹಿನ್ನೆಲೆ ಜಮ್ಮು ಕಾಶ್ಮೀರಕ್ಕಿಂದು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ. ಮಾತಾ ವೈಷ್ಣೋದೇವಿ ದೇವಾಲಯದ ನೆಲೆಯಾದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮೋದಿ ಚಾಲನೆ ನೀಡಲಿದ್ದಾರೆ. ಕತ್ರಾದಲ್ಲಿ 350 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಸಂಸ್ಥೆಯ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

ಚೆನಾಬ್‌ ಸೇತುವೆ ವಿಶೇಷತೆ ಏನು?
ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಚೆನಾಬ್‌ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಇದನ್ನೂ ಓದಿ: ಇನ್ಮುಂದೆ ಭಾರತದಲ್ಲೇ ತಯಾರಾಗುತ್ತೆ ರಫೇಲ್ ಬಿಡಿಭಾಗಗಳು – ಟಾಟಾ ಜೊತೆ ಡಸಾಲ್ಟ್ ಒಪ್ಪಂದ

ಈ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ. ಇದರ ಉಕ್ಕಿನ ಕಮಾನುಗಳು ಭೂಕಂಪನ, ಬಲವಾದ ಗಾಳಿಯನ್ನೂ ತಡೆಯುವ ಸಾಮರ್ಥ್ಯ ಹೊಂದಿದೆ, ಆ ರೀತಿ ಕಮಾನುಗಳನ್ನು ವಿನ್ಯಾಸಗೊಳಿಸಲಾಗಿದೆ.

ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಇದನ್ನೂ ಓದಿ: ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಠ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ.

ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು. ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Share This Article