Photo Gallery | ಏರ್ ಇಂಡಿಯಾ ವಿಮಾನ ಪತನ – ಭೀಕರ ಅಪಘಾತದ ದೃಶ್ಯ ಫೋಟೋಗಳಲ್ಲಿ ಸೆರೆ …
By
Share
0 Min Read
ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. 242 ಮಂದಿ ಪ್ರಯಾಣಿಕರಿದ್ದ ಈ ವಿಮಾನ ನೆಲಕ್ಕಪ್ಪಳಿಸುತ್ತಿದ್ದಂತೆ ಭಾರೀ ಸ್ಪೋಟ ಸಂಭವಿಸಿದ್ದು, ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವಿಮಾನದ ಅವಶೇಷಗಳು ವಿಮಾನ ನಿಲ್ದಾಣದ ಸುತ್ತಲೂ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ. ಗುಜರಾತ್‌ನಲ್ಲಿ ಸಂಭವಿಸಿದ ಅತಿದೊಡ್ಡ ವಿಮಾನ ಅಪಘಾತ ಇದೆಂದು ಬಣ್ಣಿಸಲಾಗುತ್ತಿದೆ. ಅಪಘಾತದ ಭೀಕರ ದೃಶ್ಯ ಹೇಗಿತ್ತು ಅನ್ನೋದನ್ನು ದೃಶ್ಯಗಳಲ್ಲಿ ಗಮನಿಸಬಹುದಾಗಿದೆ.