ಏರ್‌ ಇಂಡಿಯಾ ವಿಮಾನ ದುರಂತ – 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ

By
2 Min Read

ಅಹಮದಾಬಾದ್‌: ಇಲ್ಲಿನ ಮೇಘನಿನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏ‌ರ್ ಇಂಡಿಯಾ (Air India) ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ (Black Box) ಭಾನುವಾರ ಪತ್ತೆಯಾಗಿದೆ.

ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

2ನೇ ಬ್ಲ್ಯಾಕ್‌ ಬಾಕ್ಟ್‌ ಪ್ರಕರಣದ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್‌ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ

ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಆಗಿದ್ದೇನು?
ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಅಂದು ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು. ಇದನ್ನೂ ಓದಿ: 8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿತು. ಈ ಕುರಿತು ಇದೀಗ ವಿವಿಧ ತನಿಖಾ ಸಂಸ್ಥೆಗಳು ಹಾಗೂ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿವೆ.

ಮೇ ಡೇ – ಪೈಲಟ್‌ನ ಕೊನೇ ಸಂದೇಶ
ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

Share This Article