ಗ್ಯಾಸ್ ಟ್ಯಾಂಕರ್‌ಗೆ KSRTC ಬಸ್ ಡಿಕ್ಕಿ – 15 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

By
1 Min Read

– 30ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ: ಗ್ಯಾಸ್ ಟ್ಯಾಂಕರ್‌ಗೆ (Gas Tanker) ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಮೂವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಹದಿನೈದು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.

ಚಿಂತಾಮಣಿ ಡಿಪೋದ ಸಾರಿಗೆ ಬಸ್ ಚಿಕ್ಕಬಳ್ಳಾಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಎಂಬಿಎ, ಎಂಸಿಎ ಪ್ರವೇಶಕ್ಕೆ ಭಾನುವಾರ ಪರೀಕ್ಷೆ- ಸಿದ್ಧತೆ ಪೂರ್ಣ: ಕೆಇಎ

ಗಂಭೀರವಾಗಿ ಗಾಯಗೊಂಡವರನ್ನು ಹಾಸನ ಹಾಗೂ ಮಂಗಳೂರು ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಉಳಿದ ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ

Share This Article