ಕಬಿನಿಯಿಂದ 25 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ – ಯಾವುದೇ ಕ್ಷಣದಲ್ಲಿ ಮತ್ತಷ್ಟು ನೀರು ಬಿಡುಗಡೆ

Public TV
1 Min Read

ಮೈಸೂರು: ಕೇರಳದ ವಯನಾಡಿನಲ್ಲಿ (Wayanad) ಮಳೆ ಹೆಚ್ಚಾದ ಪರಿಣಾಮ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ (Kabini Dam) ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 2,284 ಅಡಿ ಇದ್ದು ಇಂದು 2,278.90 ಅಡಿಯಷ್ಟು ನೀರು ಸಂಗ್ರಹವಾಗಿದೆ. 20,225 ಕ್ಯುಸೆಕ್‌ ಒಳ ಹರಿವು ಇದ್ದರೆ 25,000 ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. 19.52 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 16.41 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಮೈಸೂರು| ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

 

ಯಾವುದೇ ಕ್ಷಣದಲ್ಲಿ ಮತ್ತಷ್ಟು ನೀರನ್ನು ನದಿಗೆ ಹರಿಸುವ ಸಾಧ್ಯತೆ ಹಿನ್ನಲೆಯಲ್ಲಿ ನದಿ ಪಾತ್ರದಲ್ಲಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಮಾಡಿಕೊಳ್ಳಬೇಕು. ಮುನ್ನಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ಇದನ್ನೂ ಓದಿ: ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

Share This Article