ಹಾಸನ | 22 ವರ್ಷದ ಪದವೀಧರೆ ಹೃದಯಾಘಾತಕ್ಕೆ ಬಲಿ

Public TV
1 Min Read

ಹಾಸನ: 22 ವರ್ಷದ ಯುವತಿ ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ, ಕಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿ ಸುಪ್ರಿಯಾ (22) ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ. ಕುಟುಂಬಸ್ಥರು ಬೆಂಗಳೂರಿನ (Bengaluru) ಬ್ಯಾಟರಾಯನಪುರದಲ್ಲಿ ವಾಸವಿದ್ದರು. ಇದನ್ನೂ ಓದಿ: ಮೈಸೂರು| ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡ್ತಿದ್ದ ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ನಿನ್ನೆ (ಜೂ.25) ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಪೋಷಕರಿಗೆ ಹೇಳಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಪೋಷಕರು ಸುಪ್ರಿಯಾಳನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಸುಪ್ರಿಯಾ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಅಲಕಾನಂದ ನದಿಗೆ ಉರುಳಿದ 18 ಪ್ರಯಾಣಿಕರಿದ್ದ ಬಸ್‌ – ಇಬ್ಬರು ಸಾವು, 10 ಮಂದಿ ನಾಪತ್ತೆ

ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಶಾಕ್‌ ಕೊಟ್ಟ ಯುವತಿ; ಬೆಂಗಳೂರು-ಹೈದರಾಬಾದ್‌ ರೈಲು ಸೇವೆ ಸ್ಥಗಿತ

Share This Article