ಬೆಂಗಳೂರು: ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ (Congress Government) ಎಂದು ವಿಪಕ್ಷ ನಾಯಕ ಆರ್. ಅಶೋಕ್ (R. Ashoka) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗಂಧದಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ!
ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ.
ಮಲೈ… pic.twitter.com/LTiemP3NO8
— R. Ashoka (@RAshokaBJP) June 26, 2025
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre), ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಬೆನ್ನಲ್ಲೇ ಹುಲಿಗಳ ಸಾವಿನ ಪ್ರಕರಣ ಕುರಿತು ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ
ಅಶೋಕ್ ಎಕ್ಸ್‌ನಲ್ಲಿ ಏನಿದೆ?
ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ. ಇದನ್ನೂ ಓದಿ: ಬೀಡಾಡಿ ಬೆಕ್ಕಿಗೊಂದು ಸುಂದರ ಮನೆ – ಮಂಗಳೂರಿನ ಮಾಲ್‌ಗೆ ಬರೋರ ಕಣ್ಮಣಿಯಾದ ವೈಟ್ ಕ್ಯಾಟ್
ಮಲೆ ಮಹದೇಶ್ವರ ಕಾಡು ಹುಲಿ ಸಂತತಿ (Tiger offspring) ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ, ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ. ಇದನ್ನೂ ಓದಿ: Ramanagara | ಅಡುಗೆ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್