ಮುಂಗಾರು ಚುರುಕು – ಕರಾವಳಿಗೆ ಮೂರು ದಿನ ರೆಡ್ ಅಲರ್ಟ್

By
1 Min Read

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು (Mansoon) ಚುರುಕುಗೊಳ್ಳಲಿದ್ದು, ಕರಾವಳಿಗೆ ಮುಂದಿನ ಮೂರು ದಿನ ಮತ್ತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ (Karavali) ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೊಂಚ ಬಿಡುವು ನೀಡಿದ್ದ ವರುಣಾ, ಇಂದಿನಿಂದ ಮತ್ತೆ ಜೋರು ಮಳೆ ಸುರಿಸುವ ಮುನ್ಸೂಚನೆ ನೀಡಿದ್ದಾನೆ. ಕರಾವಳಿ ಜಿಲ್ಲೆಗಳಾದ ಉಡುಪಿ , ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಇಂದು ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ – ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ

ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಗೆ ಮುಂದಿನ ಒಂದು ವಾರ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆ ಮತ್ತು ಮೋಡ ಕವಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಇದನ್ನೂ ಓದಿ: ಮಧ್ಯರಾತ್ರಿ 4 ದೇಶಗಳ ಮಾತುಕತೆ – ಇಸ್ರೇಲ್‌, ಇರಾನ್‌ ಮಧ್ಯೆ ಕದನ ವಿರಾಮ ಆಗಿದ್ದು ಹೇಗೆ?

Share This Article