ಕೊಪ್ಪಳ: ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ, ಯಾರೂ ಒತ್ತಾಯ ಮಾಡಿಲ್ಲ ಎಂದು ಸಂಸದ ರಾಜಶೇಖರ ಹಿಟ್ನಾಳ್ (Rajshekar Hitnal) ವಾಗ್ದಾಳಿ ನಡೆಸಿದರು.
ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಯಾರೂ ಪಟ್ಟು ಹಿಡಿದಿಲ್ಲ, ಯಾರೂ ಒತ್ತಾಯವನ್ನು ಮಾಡಿಲ್ಲ. ಸಿದ್ದರಾಮಯ್ಯ ಸಾಹೇಬರೇ 5 ವರ್ಷ ಸಿಎಂ ಆಗಿ ಮುಂದುವರೆಯತ್ತಾರೆಂದು ನಮ್ಮ ಎಲ್ಲ ಮುಖಂಡರು ಹೇಳಿದ್ದಾರೆ. ನಾನಷ್ಟೇ ಅಲ್ಲ, ಎಲ್ಲ ಮುಖಂಡರು ಹೇಳಿದ್ದಾರೆ. ಯಾರೋ ಒಬ್ಬರು ಹೇಳುತ್ತಾರೆ ಎಂದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಅದನ್ನು ಪಕ್ಷದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲ್ಲ ಎಂದರು.ಇದನ್ನೂ ಓದಿ: 5 ವರ್ಷ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ: ಸಿದ್ದರಾಮಯ್ಯ
ಈಗಾಗಲೇ ಇಕ್ಬಾಲ್ ಹುಸೇನ್‌ಗೆ ನೋಟಿಸ್ ಕೊಡಲಾಗಿದೆ. ಕೇವಲ ನೋಟಿಸ್ ಅಲ್ಲ, ಅವರ ಮೇಲೆ ಕ್ರಮ ಆಗುತ್ತದೆ. ಇನ್ನೂ ನಮ್ಮ ಪಕ್ಷದಲ್ಲಿ ಅಸಮಾಧಾನ ಇಲ್ಲ. ಸಿದ್ದರಾಮಯ್ಯ ಸಾಹೇಬರ ಬಗ್ಗೆ ಯಾರೂ ಮಾತಾಡಿಲ್ಲ. ಕ್ಷೇತ್ರದ ಬಗ್ಗೆ ಮಾತಾಡಿದ್ದಾರೆ ಹಾಗೂ ಅನುದಾನ ಎಲ್ಲರಿಗೂ ಸಿಕ್ಕಿದೆ. ನನ್ನ ಪ್ರಕಾರ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಸಿಎಂ ಪರ ಬ್ಯಾಟಿಂಗ್ ಮಾಡಿದರು.
ಮಂಗಳವಾರ ಸಹೋದರ ರಾಘವೇಂದ್ರ ಹಿಟ್ನಾಳ್ ಸಿಎಂ ಪರ ಬ್ಯಾಟ್ ಬೀಸಿದ್ದರು, ಇಂದು ಸಹೋದರನ ಹೇಳಿಕೆಗೆ ಸಂಸದ ರಾಜಶೇಖರ್ ಹಿಟ್ನಾಳ್ ಕೂಡ ಧ್ವನಿಗೂಡಿಸಿದರು. ಪಕ್ಷದಲ್ಲಿ ಅಸಮಾಧಾನ ಇದ್ರೆ ಹೈಕಮಾಂಡ್ ನಾಯಕರ ಗಮನಕ್ಕೆ ತರಬಾರದಾ? ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರೇನೂ ಬಿಜೆಪಿ ಜೊತೆ ಹೋಗ್ತೀನಿ ಅಂತಾ ಹೇಳಿದಾರಾ ಎಂದು ಕಿಡಿಕಾರಿದರು.ಇದನ್ನೂ ಓದಿ: ಪಕ್ಷದಲ್ಲಿ ಯಾರೇ ಶಿಸ್ತು ಉಲ್ಲಂಘಿಸಿದ್ರು ನೋಟಿಸ್ ಕೊಡ್ತೀನಿ – ಡಿಕೆಶಿ