ಶರಣಪ್ರಕಾಶ್ ಪಾಟೀಲ್ ನಿಯೋಗದಿಂದ ಜರ್ಮನಿ ಪ್ರವಾಸ

Public TV
2 Min Read

– ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ, ಡಸೆಲ್ಡಾರ್ಫ್‌ಗೆ ಭೇಟಿ
– ಕೌಶಲ್ಯ ವಿನಿಯಮ ಒಪ್ಪಂದದ ನಿರೀಕ್ಷೆ

ಬರ್ಲಿನ್: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Dr.SharanPrakash Patil) ನೇತೃತ್ವದ ನಿಯೋಗ ಜರ್ಮನಿ (Germany) ಪ್ರವಾಸ ಕೈಗೊಂಡಿದೆ.

ಸಚಿವರ ನೇತೃತ್ವದ ನಿಯೋಗವು, ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ (ಎನ್‌ಆರ್‌ಡಬ್ಲ್ಯೂ), ಡಸೆಲ್ಡಾರ್ಫ್ ಸೇರಿದಂತೆ ಜರ್ಮನಿಯ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ, ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯ ವಿನಿಮಯ, ಉದ್ಯೋಗವಾಕಾಶ ಸೇರಿದಂತೆ ಹಲವಾರು ವಿಷಯಗಳ ಕುರಿತು ಅಲ್ಲಿನ ನಿಯೋಗಮಟ್ಟದ ಸಮಾಲೋಚನೆ ಸಭೆ ನಡೆಸಲಿದೆ. ಇದನ್ನೂ ಓದಿ: ಕುರ್ಚಿಯಾಟದಲ್ಲಿ ಸಿಎಂ, ಡಿಸಿಎಂ ಮೈಂಡ್ ಗೇಮ್ – ಟ್ರಿಕ್ಕಿ ಪಾಲಿಟಿಕ್ಸ್‌ನಲ್ಲಿ ಯಾರಾಗ್ತಾರೆ ವಿನ್?

ಯಾಂತ್ರೀಕೃತ ಕೈಗಾರಿಕೆ, ಮೆಕಾಟ್ರಾನಿಕ್ಸ್ ಮತ್ತು ಸ್ಮಾರ್ಟ್ ಉತ್ಪಾದನೆಯಂತಹ ಕ್ಷೇತ್ರಗಳಲ್ಲಿ ಅಪ್ರೆಂಟಿಸ್‌ಶಿಪ್, ಕೌಶಲ್ಯ ಸಹಯೋಗದ ಕುರಿತು ಸಚಿವರ ನೇತೃತ್ವದ ನಿಯೋಗ ಅಧ್ಯಯನ ನಡೆಸಿ, ಕೆಲವು ಮಹತ್ವದ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆ. ಇದನ್ನೂ ಓದಿ: ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

ಷ್ನೇಯ್ಡರ್ ಎಲೆಕ್ಟ್ರಿಕ್, ಡಸೆಲ್ಡಾರ್ಫ್
ಬೆಂಗಳೂರಿನ ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ವೈ.ಕೆ.ದಿನೇಶ್ ಕುಮಾರ್ ಮತ್ತು ಹಿರಿಯ ಅಧಿಕಾರಿಗಳ ನಿಯೋಗ ಡಸೆಲ್ಡಾರ್ಫ್ನಲ್ಲಿ ಜರ್ಮನ್ ನರ್ಸಿಂಗ್ ಅಪ್ರೆಂಟಿಶಿಪ್, ಕರ್ನಾಟಕ ಮತ್ತು ಎನ್‌ಆರ್‌ಡಬ್ಲ್ಯೂ ನಡುವೆ ರಚನಾತ್ಮಕ ಕೌಶಲ್ಯ ವಲಸೆ ಮಾರ್ಗವನ್ನು ರೂಪಿಸುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿತು. ಇದನ್ನೂ ಓದಿ: 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

ಜಿಟಿಟಿಸಿಯ ತಾಂತ್ರಿಕ ಪಠ್ಯಕ್ರಮವನ್ನು ಜರ್ಮನ್ ತರಬೇತಿ ಮಾನದಂಡಗಳೊಂದಿಗೆ ಅಳವಡಿಸಿಕೊಳ್ಳುವುದು, ಕರ್ನಾಟಕದ ಯುವಕರಿಗೆ ರಚನಾತ್ಮಕ ಪೂರ್ವ-ನಿರ್ಗಮನ ತರಬೇತಿಯನ್ನು ಪ್ರಾಯೋಗಿಕವಾಗಿ ನೀಡುವ ಬಗ್ಗೆ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

ಸನಾ ಕ್ಲಿನಿಕೆನ್
ಕರ್ನಾಟಕದ ತರಬೇತಿ ಪಡೆದ ನರ್ಸಿಂಗ್ ವೃತ್ತಿಪರರಿಗೆ ಪ್ಫ್ಲೆಜ್ ಆಸ್‌ಬಿಲ್ಡಂಗ್ (ನರ್ಸಿಂಗ್ ಅಪ್ರೆಂಟಿಸ್‌ಶಿಪ್‌ಗಳು) ಮತ್ತು ನೈತಿಕ ವಲಸೆ ಚೌಕಟ್ಟುಗಳಿಗೆ ಮಾರ್ಗಗಳನ್ನು ಅನ್ವೇಷಿಸಲು ಸಚಿವರು ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳನ್ನು ಸಹ ಭೇಟಿಯಾದರು. ಇದನ್ನೂ ಓದಿ: ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

ಕರ್ನಾಟಕ ಮತ್ತು ನಾರ್ತ್ ರೈನ್-ವೆಸ್ಟ್ಫಾಲಿಯಾ ನಡುವೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ದೀರ್ಘಕಾಲೀನ ಕೌಶಲ್ಯ ಪಾಲುದಾರಿಕೆ, ಕರ್ನಾಟಕದ ಸಾವಿರಾರು ಯುವಕರು ಜರ್ಮನಿಯಲ್ಲಿ ಉತ್ತಮ ಗುಣಮಟ್ಟದ ವೃತ್ತಿಪರ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲು ಅನುವು ಮಾಡಿಕೊಡುವ ಕುರಿತು ಸಚಿವರು ಅಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

Share This Article