ಬೆಂಗಳೂರು: ಬಿಡಿಎಯು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ವಿಶ್ವೇಶ್ವರಯ್ಯ ಬಡಾವಣೆಯ (Vishweshwaraiah Layout) 6ನೇ ಬ್ಲಾಕ್‌ನಲ್ಲಿ 7 ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲೂಕು, ಯಶವಂತಪುರ ಹೋಬಳಿ, ಉಲ್ಲಾಳು ಗ್ರಾಮದ ಸರ್ವೆ ನಂ. 27/1ರಲ್ಲಿನ ಸುಮಾರು 6,400 ಚದರ ಅಡಿ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಅನ್ನು ತೆರವುಗೊಳಿಸಿ, ಸುಮಾರು 7 ಕೋಟಿ ರೂ. ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು. ಇದನ್ನೂ ಓದಿ: 9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ಮಾಡಲಾಯಿತು.