ಬೆಳಗಾವಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಹಾಗೂ ಕಾರು (Car) ನಡುವೆ ಭೀಕರ ಅಪಘಾತ (Accident) ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗೀರಿಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಮೃತ ದುರ್ದೈವಿಗಳು. ರಾಧಿಕಾ ಮ್ಯಾಲೇಶಿ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ, ಗೇಟ್ ಪಾಸ್ ನೀಡೋದು ಪಕ್ಕಾ: ಆರ್. ಅಶೋಕ್ ಭವಿಷ್ಯ
ಮೃತರೆಲ್ಲರೂ ಕಲಬುರಗಿ (Kalaburagi) ಜಿಲ್ಲೆಯ ಅಪ್ಜಲಪುರ ಮೂಲದವರು ಎಂದು ತಿಳಿದು ಬಂದಿದೆ. ಕೊಲ್ಲಾಪುರ ಮಹಾಲಕ್ಷ್ಮಿ ದೇವಿ ದರ್ಶನ ಮಾಡಿ ಮರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಕ್ಯಾಬ್ ಚಾಲಕರನ್ನೇ ಟಾರ್ಗೆಟ್ ಮಾಡಿ ಹತ್ಯೆ – 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಹಂತಕ ಅರೆಸ್ಟ್
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.