ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
1 Min Read

ರಾಯಚೂರು: ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichuru) ಮಸ್ಕಿ (Maski) ಪಟ್ಟಣದ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಮಸ್ಕಿ ತಾಲೂಕಿನ ಪಗಡದಿನ್ನಿ ಕ್ಯಾಂಪ್‌ನ ಶರಣಬಸವ (32) ಮೃತ ದುರ್ದೈವಿ.ಇದನ್ನೂ ಓದಿ: ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

ಎದೆನೋವಿನಿಂದ ನರಳುತ್ತಿದ್ದ ವ್ಯಕ್ತಿಯನ್ನ ಆತನ ಸ್ನೇಹಿತರು ಚಿಕಿತ್ಸೆಗಾಗಿ ಬೈಕ್‌ನಲ್ಲಿಯೇ ಮಸ್ಕಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಆದರೆ ಆ ಸಮಯದಲ್ಲಿ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಲ್ಲಿದ್ದ ನರ್ಸ್‌ಗಳು ಆತನಿಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಕೂಡ ಫಲಕಾರಿಯಾಗಿರಲಿಲ್ಲ.

ಪ್ರಾಣ ಉಳಿಸಲು ಆತನ ಸ್ನೇಹಿತರು, ಸಂಬಂಧಿಕರು ನಾನಾ ಪ್ರಯತ್ನಗಳನ್ನು ಮಾಡಿದ್ದು, ಬಳಿಕ ಆರೋಗ್ಯ ಕೇಂದ್ರದಿಂದ ಸಿಂಧನೂರು (Sindhunuru) ತಾಲೂಕಾಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ನರಳಾಡಿ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರ – ಜು.9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

Share This Article