ಉಡುಪಿ: ಮೀನು ಹಿಡಿಯಲು ಸಮುದ್ರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನಾಡದೋಣಿ ಮಗುಚಿ ಮೃತಪಟ್ಟ ಘಟನೆ ಉಡುಪಿಯ (Udupi) ಕೋಡಿಬೇಂಗ್ರೆ ಕಡಲ ತೀರದಲ್ಲಿ ನಡೆದಿದೆ.
ಮೃತರನ್ನು ನೀಲಾಧರ್ (45) ಎಂದು ಗುರುತಿಸಲಾಗಿದೆ. ಮೀನುಗಾರಿಕೆಗೆ ತೆರಳಿದ್ದಾಗ, ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದೆ. ಇದರಿಂದ ಅವರು ಬಲೆಗೆ ಸಿಲುಕಿ ಈಜಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಐದಾರು ದೋಣಿಗಳ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಿ ಮಲ್ಪೆಯ (Malpe) ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮಳೆ ಪ್ರಮಾಣದಲ್ಲಿ ಚಿರಾಪುಂಜಿ, ಆಗುಂಬೆಯನ್ನು ಹಿಂದಿಕ್ಕಿದ ಉಡುಪಿ
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಡಲಿಗಿಳಿಯುವ ಮೀನುಗಾರರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ – ಕ್ಷಮೆಯಾಚಿಸಿದ ಪೊಲೀಸ್ ಮುಖ್ಯಸ್ಥ